Sun,May19,2024
ಕನ್ನಡ / English

ಡಿ.ಜೆ.ಹಳ್ಳಿ ಗಲಭೆ ಸಂಪೂರ್ಣ ಆಯೋಜಿತ, ಪೋಸ್ಟ್ ಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತ - ಡಿಸಿಎಂ | Janata news

13 Aug 2020
1986

ಬೆಂಗಳೂರು : ಕೆಲವೇ ಗಂಟೆಯೊಳಗೆ ಡಿ.ಜೆ.ಹಳ್ಳಿ ಮತ್ತು ಕಾವಲ್‌ ಭೈರಸಂದ್ರದಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ನವೀನ್ ಕಾಂಗ್ರೆಸ್ ಕಾರ್ಯಕರ್ತ, ಎಂದಿರುವ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಸದ್ಯಕ್ಕೆ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ, ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಸಚಿವ ಸಿ.ಟಿ.ರವಿ ಅವರು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಲಾದ ನವೀನ್ ಪೋಸ್ಟ್ ಮಾಡಿರುವ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ, ಪ್ರಿಯಂಕಾ ಗಾಂಧಿ ಚಿತ್ರಗಳನ್ನು ಹಂಚಿಕೊಂಡು, ಯಾವ ಮುಖ ಇಟ್ಟುಕೊಂಡು ನವೀನ್ ನನ್ನು ಬಿಜೆಪಿಯವ ಎಂದು ಹೇಳುತ್ತಿರಿ? ಎಂದು ಪ್ರಶ್ನಿಸಿದ್ದರು.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಡಿಸಿಎಂ ಡಾ.ಅಶ್ವತನಾರಾಯಣ ಅವರು, ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ಸಿಗರ ನಡೆ ಸರಿ ಇಲ್ಲ. ನವೀನ್ ಬಿಜೆಪಿ ಕಾರ್ಯಕರ್ತ ಅಲ್ಲ. ಕಾಂಗ್ರೆಸ್ ಕಾರ್ಯಕರ್ತ. ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ಮಾಹಿತಿ ಕೊರತೆ ಇದೆ. ಒಂದು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ವ್ಯಕ್ತಿ ಹೀಗೆ ಮಾತಾಡೋದು ಸರಿಯಲ್ಲ, ಎಂದಿದ್ದಾರೆ.

ಮುಸ್ಲಿಂ ಧರ್ಮದ ಪ್ರವಾದಿ ವಿರುದ್ಧ ಪೋಸ್ಟ್ ಹಿನ್ನೆಲೆಯಲ್ಲಿ ನಗರದ ಡಿ.ಜೆ.ಹಳ್ಳಿ ವ್ಯಾಪಿಯಲ್ಲಿ ಹಿಂಸಾಚಾರ ನಡೆಸಿದ ಎಲ್ಲರನ್ನೂ ಸರ್ಕಾರ ಶಿಕ್ಷೆ ನೀಡಲಿದೆ, ಎಂದು ಡಿಸಿಎಂ ಡಾ.ಅಶ್ವತನಾರಾಯಣ ಹೇಳಿದ್ದಾರೆ. ಅವಾಂತರಗಳಲ್ಲಿ ಯಾವುದೇ ದಂಗೆಕೋರರು ಮತ್ತು ಅಗ್ನಿಸ್ಪರ್ಶ ಮಾಡಿದವರನ್ನು ನಮ್ಮ ಸರ್ಕಾರವು, ಅವರು ಎಲ್ಲಿ ಅಡಗಿದ್ದರೂ ಬೇಟೆಯಾಡಲಿದೆ, ಎಂದು ಹೇಳಿದ್ದಾರೆ.

ಹಿಂಸೆಯ ಪ್ರಮಾಣ ಮತ್ತು ಸಂಘಟಿತ ಸ್ವರೂಪವು ಈ ಜಿಹಾದಿ ಸಂಘಟನೆಗಳಿಂದ ಸಂಪೂರ್ಣವಾಗಿ ಆಯೋಜಿಸಲಾಗಿದೆ ಎಂಬುದನ್ನು ಖಚಿತಪಡಿಸುತ್ತದೆ, ಎಂದು ಅವರು ಹೇಳಿದ್ದಾರೆ.

ಈ ಹಿಂಸಾಚಾರವು ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣ ಮತ್ತು ಅವರ ಸ್ವಂತ ಪಕ್ಷದ ಆಂತರಿಕ ಜಗಳಗಳ ನೇರ ಪರಿಣಾಮವಾಗಿದೆ. ಆಘಾತಕಾರಿ ಸಂಗತಿಯೆಂದರೆ, ಬೆಂಕಿಯಿಡುವ ವಿಷಯವನ್ನು ಪೋಸ್ಟ್ ಮಾಡಿದ ವ್ಯಕ್ತಿ ಸ್ವತಃ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ.

ಈ ಘಟನೆಯು ಕಾನೂನು ಪಾಲಿಸುವ ಮುಗ್ಧ ನಾಗರಿಕರಲ್ಲಿ ಭಯವನ್ನು ಉಂಟುಮಾಡಿತು ಮತ್ತು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಅಪಾರ ಹಾನಿ ಉಂಟುಮಾಡಿದೆ, ಎಂದು ಹೇಳಿ ಡಾ.ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ.

English summary :D.J.Halli riot entirely orchestrated, posted by congress youth - DCM

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...