Sun,May19,2024
ಕನ್ನಡ / English

ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ! | Janata news

21 Sep 2020
1623

ಮೈಸೂರು : ವೃದ್ಧ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಅವರ ನಿವಾಸದಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರಿನ ನಿವೇದಿತಾ ನಗರದಲ್ಲಿ ನಡೆದಿದೆ.

ಕೊಲೆಯಾದವರನ್ನು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ (67) ಎಂದು ಗುರುತಿಸಲಾಗಿದ್ದು, ಇವರು ಪತ್ನಿಯಿಂದ ಪ್ರತ್ಯೇಕವಾಗಿ ಒಬ್ಬರೇ ವಾಸವಿದ್ದರು.

ಭಾನುವಾರ ತಡರಾತ್ರಿ ಸುಮಾರಿಗೆ ಆಗಮನಿಸಿದ ಇಬ್ಬರು ಹಂತಕರು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರ ಮನೆಗೆ ಆಗಮಿಸಿ ಕಾಲಿಂಗ್‌ ಬೆಲ್‌ ಒತ್ತಿದ್ದಾರೆ. ಬಳಿಕ ಬಾಗಿಲು ತೆರೆಯುತ್ತಿದ್ದಂತೆ ಪರಶಿವಮೂರ್ತಿ ಅವರಿಗೆ ಇರಿದಿದ್ದಾರೆ. ಎದೆ, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಿಗೆ ಮನಸೋ ಇಚ್ಛೆ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದೊಂದಿಗೆ ಮನೆಯ ಹಾಲ್‌ಗೆ ಬಂದ ಇವರು ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೂಲತಃ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮದವರಾದ ಇವರು ಕುವೆಂಪುನಗರ ಪಿಯು ಕಾಲೇಜು, ಚಿತ್ರದುರ್ಗದ ಜಿಲ್ಲೆಯ ಚಳ್ಳಕೆರೆ ಸರ್ಕಾರಿ ಪಿಯು ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಹಾಸನದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದಾಗಲೇ ನಿವೃತ್ತರಾಗಿದ್ದರು.

ಇವರ ಪತ್ನಿಯು ತಮ್ಮ 8 ವರ್ಷದ ದತ್ತು ಪುತ್ರನೊಂದಿಗೆ ಪ್ರತ್ಯೇಕವಾಗಿ ಕುವೆಂಪುನಗರದಲ್ಲಿ ವಾಸವಿದ್ದರು. ಪರಶಿವಮೂರ್ತಿ ಬಡ್ಡಿ ವ್ಯವಹಾರ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.

ಕಳೆದ 15 ವರ್ಷದ ಹಿಂದೆಯಷ್ಟೇ ಸವಿತಾ ಎಂಬುವವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಮಕ್ಕಳಿಲ್ಲದ ಕಾರಣ ಬಾಲಕನೊಬ್ಬನನ್ನು ದತ್ತು ಪಡೆದುಕೊಂಡಿದ್ದರು. ನಂತರ ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ದಂಪತಿ ದೂರವಾಗಿದ್ದುರು.

English summary :Mysuru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...