Sat,Apr27,2024
ಕನ್ನಡ / English

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂಸ್

24 Jul 2021
2679

ಬೆಂಗಳೂರು : ರಾಜ್ಯದಲ್ಲಿ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೊತೆಗೆ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಸಿದ್ದಾರೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು (ಜುಲೈ 24) ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ ಆರೆಂಜ್ ಅಲರ್ಟ್ ಇದ್ದರೆ, ಗದಗ, ಹಾವೇರಿ, ಕಲಬುರಗಿ ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 72 ಗಂಟೆಗಳ ಕಾಲ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಚಾರ್ಮಾಡಿ ಘಾಟ್ ಸೇರಿ ಕೊಡಗು, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೆಳಗಾವಿ, ಹಾಸನ, ಧಾರವಾಡ, ದಾವಣಗೆಡೆ, ಕೊಡಗು ಹಾಗೂ ಉತ್ತರ ಕನ್ನಡದ ಹಲವಡೆ ಮತ್ತೆ ಭೂ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಮಳೆ ಸಂಬಂಧಿ ಅನಾಹುತಗಳಿಗೆ ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಉತ್ತರ ಕನ್ನಡದಲ್ಲಿ ಮಳೆ ಅನಾಹುತ ಸೃಷ್ಟಿಸಿದ್ದು, ಹೆಲಿಕಾಪ್ಟರ್ ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಗಂಗಾವಳಿ ನದಿಯಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಬೋಟ್ ಮುಳುಗಿದ ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಚಿಕ್ಕಮಗಳೂರಲ್ಲಿ ತುಂಗಾ, ಭದ್ರಾ, ಹೇಮಾವತಿ, ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್ ಗಂಗಾ, ಹಿರಣ್ಯಕೇಶಿ, ಪಾಂಡ್ರಿ, ಹಾವೇರಿಯಲ್ಲಿ ತುಂಗಭದ್ರಾ, ವರದಾ, ಧರ್ಮಾ, ಕುಮುದ್ವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.

ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ, ಪಶ್ಚಿಮ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ ಸೇರಿ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಜಿಲ್ಲೆಯಲ್ಲಿ 51 ಗ್ರಾಮಗಳು ಜಲಾವೃತಗೊಂಡಿದ್ದು, 36 ಸೇತುವೆಗಳು ಮುಳುಗಡೆಯಾಗಿವೆ. 51 ಗ್ರಾಮಗಳಿಗೆ ನೀರು ನುಗ್ಗಿದ್ದು, ಕಾಳಜಿ ಕೇಂದ್ರಗಳಲ್ಲಿ 200 ಜನರಿಗೆ ಆಶ್ರಯ ನೀಡಲಾಗಿದೆ. 300ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.

RELATED TOPICS:
English summary :Rain in Karnataka

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...