Tue,Apr23,2024
ಕನ್ನಡ / English

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್

28 Jul 2021
2433

ಮೈಸೂರು : ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ್ದಿದ್ದು, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಹಾಗೆಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ಅಲ್ಲದೇ ತಂದೆ ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮನಾಗಲಿಲ್ಲ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ,' ಎಂದು ಹೇಳಿದರು.

"ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾ? ಎಂದು ಪ್ರಶ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಹೆಸರನ್ನು ಸೂಚಿಸಿರುವುದು ಯಡಿಯೂರಪ್ಪ, ಸರ್ಕಾರದ ಮೇಲೆ ಬಿಎಸ್‌ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾ?,' ಎಂದರು.

ಆದರೆ, ಈ ಕ್ಷಣದಲ್ಲೇ ನಾನು ಬೊಮ್ಮಯಿ ಬಗ್ಗೆ ಏನೂ ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.

ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಇಳಿದಿದ್ದಾರೆ, ಬೊಮ್ಮಾಯಿ ಸಿಎಂ ಆಗಿದ್ದಾರೆ ಅಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದ್ದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನೀರೀಕ್ಷೆ ಮಾಡೋದಿಲ್ಲ. ಆದರೆ, ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ ಎಂದು ಸಲಹೆ ನೀಡಿದರು.

RELATED TOPICS:
English summary :Siddaramaiah

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...