Sat,Apr27,2024
ಕನ್ನಡ / English

ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂಸ್

12 Jun 2021
2192

ಬೆಂಗಳೂರು : ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲು ಪೂರೈಕೆ ಮಾಡುತ್ತಿದ್ದ ಮೂವರು ರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಸತೀಶ್ ಆಲಿಯಾಸ್ ಮಾರ್ಕೆಟ್ ಸತೀಶ್ (38) ಮತ್ತು ಈತನ ಇಬ್ಬರು ಸಹಚರರರಾದ ಧೃವ ಹಾಗೂ ಶಂಕರ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಎರಡು ಗನ್ ಹಾಗೂ ಹತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಗನ್ ಸಪ್ಲೈಯರ್ ಸತೀಶ್ ಮೂಲತಃ ಕಲಬುರಗಿಯವ. ನಾಲ್ಕು ಕೊಲೆ ಕೇಸ್ ಸೇರಿ 30ಕ್ಕೂ ಹೆಚ್ಚು ವಿವಿಧ ಅಪರಾಧ ಮಾಡಿರುವ ಆರೋಪ ಈತನ ಮೇಲಿದೆ. ಉತ್ತರ ಪ್ರದೇಶ, ಬಿಹಾರ್ ಹಾಗೂ ಮಧ್ಯಪ್ರದೇಶದಿಂದ 15 ರಿಂದ 20 ಸಾವಿರಕ್ಕೆ ಕಂಟ್ರಿಮೇಡ್ ಪಿಸ್ತೂಲ್ ಖರೀದಿ ಮಾಡ್ತಿದ್ದ. ಅದನ್ನ ಬೆಂಗಳೂರಿನ ರೌಡಿಗಳಿಗೆ 80 ಸಾವಿರದಿಂದ 1 ಲಕ್ಷ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಕಾಡುಬೀಸನಹಳ್ಳಿ ಸೋಮ ಮತ್ತು ರೋಹಿತ್ ರೌಡಿಗಳಾಗಿದ್ದು, ಪರಸ್ಪರ ಹತ್ಯೆಗೆ ಸಂಚು ರೂಪಿಸಿದ್ದರು. ಎರಡು ತಿಂಗಳ ಹಿಂದೆ ರೋಹಿತ್, ಸೋಮನ ಹತ್ಯೆಗೆ ಸಂಚು ರೂಪಿಸಿ ಮಂಗಳೂರಿನಿಂದ ಯುವಕರನ್ನು ಕರೆಸಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ರೋಹಿತ್ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾದ ರೋಹಿತ್ ಹತ್ಯೆಗೆ ಸಂಚು ರೂಪಿಸಿದ ಸೋಮ ಮತ್ತು ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದರು. ರೋಹಿತ್ ಮತ್ತು ಆತನ ಸಹಚರರ ವಿಚಾರಣೆಯಲ್ಲಿ ಸತೀಶ್ ಹೆಸರು ಬಾಯಿಬಿಟ್ಟಿದ್ದರು. ಅಲ್ಲದೆ, ಇದೇ ಸತೀಶ್ ರೌಡಿ ಜೀತು, ಗಣೇಶ್ ಕೊಲೆಗೆ ಗೊಟ್ಟಿಗೆರೆ ಪರಮೇಶ್ ಗೂ ಕಂಟ್ರಿಮೇಡ್ ಪಿಸ್ತೂಲ್ ಕೊಟ್ಟಿದ್ದರು ಎಂಬುದು ಗೊತ್ತಾಗಿದೆ.

ಮತ್ತೊಂದೆಡೆ ಖಚಿತ ಮಾಹಿತಿ ಮೇರೆಗೆ ಇಸ್ರೋ ಲೇಔಟ್ ನ ಶಂಕರ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದಾಗ ಸತೀಶ್ ಮಾರಾಟ ಮಾಡಿದ್ದ ಪಿಸ್ತೂಲ್ ಸಿಕ್ಕಿದೆ. ಈ ಮಾಹಿತಿ ಮೇರೆಗೆ ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದ ಸತೀಶ್​ನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...