Fri,Apr19,2024
ಕನ್ನಡ / English

ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ 6 ಸಚಿವರು ನೀಡಿದ ಸ್ಪಷ್ಟನೆ ಏನು ಗೊತ್ತಾ? | Janata news

06 Mar 2021
1534

ಬೆಂಗಳೂರು : ತಮ್ಮ ಆಪ್ತ ರಮೇಶ್​ ಜಾರಕಿಹೊಳಿ ಅವರ ಸಿಡಿ ಪ್ರಕರಣ ಹೊರಬರುತ್ತಿದ್ದಂತೆ, ರಮೇಶ್​ ಆಪ್ತರಾದ ಆರು ಮಂದಿ ಸಚಿವರು ತಮ್ಮ ವಿರುದ್ಧ ಯಾವುದೇ ರೀತಿಯ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದು ಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ. ಆದ್ದರಿಂದಲೇ ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರ ವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ. ಸತ್ಯಮೇವ ಜಯತೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಸಚಿವ ಬಿ ಸಿ ಪಾಟೀಲ್ ಬರೆದುಕೊಂಡಿದ್ದಾರೆ.

ಸಚಿವ ಭೈರತಿ ಬಸವರಾಜ್, ನಮ್ಮ ತೇಜೋವಧೆ ಆಗಬಾರದೆಂದು ಕೋರ್ಟ್ ಮೊರೆ ಹೋಗಿದ್ದೇವೆ. ಹೀಗಾಗಿ ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತಾನಾಡಿದ ಎಸ್.ಟಿ.ಸೋಮಶೇಖರ್, ಅಧಿವೇಶನದ ವೇಳೆ ನಮ್ಮನ್ನು ಟಾರ್ಗೆಟ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎಂದು ಹಳೆಯ ಸ್ನೇಹಿತರು ನಮಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಅವಮಾನ, ತೇಜೋವಧೆ ಮಾಡಲು ಟಾರ್ಗೆಟ್ ಮಾಡಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ.

ನಾವು ಯಾವುದೋ ಭೀತಿಯಿಂದ ಕೋರ್ಟ್‌ಗೆ ಹೋಗಿಲ್ಲ. ನಾವು ರಾಜಕೀಯ ಷಡ್ಯಂತ್ರಕ್ಕೆ ಟಾರ್ಗೆಟ್ ಆಗಬಾರದು. 2-3 ನಿಮಿಷದಲ್ಲಿ ತೇಜೋವಧೆ ಮಾಡಿದ್ರೆ ಹೇಗೆ? ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ.

ನಿನ್ನೆ 6 ಸಚಿವರು ಕೋರ್ಟ್​ಗೆ ಅರ್ಜಿ ಹಾಕಿದ್ದೇವೆ. ಇಂದು ಮತ್ತೆ 6 ಜನ ಕೋರ್ಟ್​ಗೆ ಅರ್ಜಿ ಹಾಕುತ್ತಾರೆ ಎಂದು ಮತ್ತಷ್ಟು ಸಚಿವರು ಅರ್ಜಿ ಹಾಕುವ ಬಗ್ಗೆ ಸೋಮಶೇಖರ್ ಸುಳಿವು ನೀಡಿದ್ದಾರೆ.

RELATED TOPICS:
English summary :Bangalore

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...