Sat,Apr27,2024
ಕನ್ನಡ / English

ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ 11ರ ಪೋರಿ! | Janata news

06 Mar 2021
2363

ಉಡುಪಿ : ಕೆಸರು ಗದ್ದೆಯಲ್ಲಿ ಕೊಬ್ಬಿದ ಕೋಣಗಳ ಓಟ, ತುಳುನಾಡಿನ ಅಪ್ಪಟ ಜನಪದ ಆಟ ಎಂದರೆ, ಅದು ಕರಾವಳಿಯ ಹೆಮ್ಮೆಯ ಕಂಬಳ. ಈ ಕಂಬಳದಲ್ಲಿ ಸದ್ಯ ಪುಟ್ಟ ಬಾಲಕಿ ಕೆಸರು ಗದ್ದೆಗೆ ಇಳಿದು ಹೊಸ ಇತಿಹಾಸ ಬರೆದಿದ್ದಾಳೆ.

ಕಾರ್ಕಳ ತಾಲೂಕು ಮಿಯಾರಿನ ಲವಕುಶ ಜೋಡುಕರೆ ಕಂಬಳದಲ್ಲಿ ಬೈಂದೂರಿನ ಪರಮೇಶ್ವರ ಭಟ್ – ರಮ್ಯಾ ಅವರ ಪುತ್ರಿ ಚೈತ್ರಾ ಮೊತ್ತಮೊದಲ ಬಾರಿಗೆ ಕಂಬಳ ಕರೆಗೆ ಇಳಿದಿದ್ದಾಳೆ. ಈ ಮೂಲಕ ಪುರುಷ ಪ್ರಧಾನವಾಗಿರುವ ಕಂಬಳ ಕ್ರೀಡೆಯಲ್ಲಿ ಬಾಲಕಿಯ ಪ್ರವೇಶವಾಗಿದೆ.

11 ವರ್ಷದ ಈಕೆ ಆರನೇ ತರಗತಿ ಕಲಿಯುತ್ತಿದ್ದು, ತಾನು ಕೂಡ ಕಂಬಳದಲ್ಲಿ ಕೋಣಗಳನ್ನು ಓಡಿಸಬೇಕು, ಕಂಬಳ ಕ್ಷೇತ್ರದ ಹುಸೇನ್ ಬೋಲ್ಟ್ ಶ್ರೀನಿವಾಸ ಗೌಡರಂತೆ ಮಿಂಚಬೇಕು ಎಂದು ಕನಸು ಕಾಣುತ್ತಿದ್ದಾಳೆ. ಕೋಣವನ್ನ ಮುದ್ದಾಡಿ, ಸ್ನಾನ, ಶುಚಿ, ‌ಆಹಾರ ಹೀಗೆ ಎಲ್ಲಾ ಕಾರ್ಯ ಮಾಡುತ್ತಾ ಮುಂದಿನ ಕಂಬಳ ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಕನಸನ್ನ ಕಾಣುತ್ತಿದ್ದಾಳೆ.

ಹಗ್ಗ ಹಿಡಿದು, ಕೋಣಗಳ ಯಜಮಾನಿಕೆ ಹೊತ್ತು ಕಂಬಳ ಕರೆಗೆ ಇಳಿಯುವ ಗತ್ತಿಗೆ ಜಾನಪದ ಕ್ರೀಡೆಯ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಪುರುಷ ಪ್ರಧಾನ ಕಂಬಳ ಗದ್ದೆಗೆ ಆಯೋಜಕರು ಶಾಲು ಹಾಕಿ ಸ್ವಾಗತ ಮಾಡಿದ್ದಾರೆ.

RELATED TOPICS:
English summary :Udupi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...