ಪುನೀತ್ ಫೋಟೋ ಎದುರು ಶಾಂಪೇನ್ ಬಾಟಲಿ ಓಪನ್; ಅಪ್ಪು ಫ್ಯಾನ್ಸ್‌ಗಳಿಗೆ ಕ್ಷಮೆಯಾಚಿಸಿದ ನಟಿ ರಚಿತಾ ರಾಮ್ | ಜನತಾ ನ್ಯೂಸ್

13 Nov 2021
594

ಬೆಂಗಳೂರು : ನಿನ್ನೆ ಖಾಸಗಿ ಹೋಟೆಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡುವ ವೇಳೆ ಪರದೆಯ ಮೇಲೆ ಚಿತ್ರದ ಗೀತೆ ಬದಲು ಅಪ್ಪು ನಮನದ ವಿಡಿಯೋ ಪ್ಲೇ ಆಗಿ ಸಾಕಷ್ಟು ಅವಾಂತರ ಸೃಷ್ಟಿಸಿತ್ತು.

ಆ ಮೂಲಕ ಅಪ್ಪು ಅಭಿಮಾನಿಗಳ ಕೆಂಗಣ್ಣಿಗೆ ಚಿತ್ರತಂಡ ಗುರಿಯಾಗಿತ್ತು. ಇನ್ನು ಈ ಕುರಿತು "ಏಕ್​ ಲವ್​ ಯಾ" ಚಿತ್ರದಲ್ಲಿ ಅಭಿನಯಿಸಿರುವ ರಚಿತಾ ರಾಮ್​ ಟ್ವೀಟ್​ ಮಾಡಿ ಕ್ಷಮೆಕೋರಿದ್ದಾರೆ.

ನಿನ್ನೆಯ ಘಟನೆ ಬಗ್ಗೆ ನಿಮ್ಮೆಲ್ಲರಿಗೂ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನು ಕೂಡ ಚಿತ್ರದ ಭಾಗವಾಗಿರೋದ್ರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡೋ ಉದ್ದೇಶ, ಅಥವಾ ಆಲೋಚನೆ ಯಾವ ಕನ್ನಡಿಗರಿಗೂ ಇರೋಲ್ಲ.. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸಿತ್ತಾರೆಂದು ನಂಬಿದ್ದೇನೆ. ಎಂದು ಟ್ವೀಟ್​ ಮಾಡಿದ್ದಾರೆ.

ನಾನು ಬಾಟಲ್ ಓಪನ್ ಮಾಡುವಾಗ ತಾಂತ್ರಿಕ ತೊಂದರೆಯಿಂದಾಗಿ ಅಪ್ಪು ಫೋಟೋ ಎಲ್‍ಇಡಿ ಮೇಲೆ ಬಂದು ಬಿಟ್ಟಿತ್ತು. ನಾವು ಯಾರ ಭಾವನೆಯನ್ನು ನೋಯಿಸುವ ಉದ್ದೇಶ ಇರಲಿಲ್ಲ. ಸಾಂಗ್ ರಿಲೀಸ್ ಕಾರ್ಯಕ್ರಮವಾಗಿತ್ತು. ಆ ಹಾಡಿಗೆ ಸಂಬಧಪಟ್ಟಂತೆ ನಾವು ಎನೋ ಮಾಡಲು ಹೋಗಿ ಹೀಗೆ ಆಯ್ತು. ಅಪ್ಪು ಅಭಿಮಾನಿಗಳಿಗೆ ಈ ವಿಚಾರವಾಗಿ ನೋವು ಆಗಿದೆ ಎಂದು ಕ್ಷಮೆ ಕೇಳಿದ್ದಾರೆ.

janata

ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ನಿರ್ಮಾಪಕ ಸಾ.ರಾ. ಗೋವಿಂದು, "ಪುನಿತ್ ರಾಜ್‌ಕುಮಾರ್‌ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿದ್ದರಿಂದ ಈಗ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ. "ಏಕ್ ಲವ್ ಯಾ" ಚಿತ್ರತಂಡದವರು ಅಪ್ಪು ಅಭಿಮಾನಿಗಳಲ್ಲಿ ತಕ್ಷಣವೇ ಕ್ಷಮೆ ಕೇಳಬೇಕು" ಎಂದು ಆಗ್ರಹಿಸಿದ್ದರು.

ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ, ಆ ಕಾರಣಕ್ಕೆ ನ.4ರಂದು ಬಿಡುಗಡೆಯಾಗಬೇಕಿದ್ದ ಹಾಡನ್ನು ನ.12ಕ್ಕೆ ಮಾಡಲಾಯಿತು, ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ ಹಾಗು ಅವರ ಜೊತೆ ಕಳೆದ ಕ್ಷಣಗಳನ್ನು ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು ಗೌರವ ಸಲ್ಲಿಸುತ್ತಾ. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡಿನ ಬಿಡುಗಡೆಯ ಅಂಗವಾಗಿತ್ತು. ಅದು ಅಷ್ಟಕ್ಕೇ ಸೀಮಿತ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ "ಏಕ್ ಲವ್ ಯಾ" ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ ಎಂದು ಜೋಗಿ ಪ್ರೇಮ್ ಪೋಸ್ಟ್ ಹಾಕಿದ್ದಾರೆ.

ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ, ನಟಿ ರಕ್ಷಿತಾ ಪ್ರೇಮ್, ರಚಿತಾ ರಾಮ್ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ.

RELATED TOPICS:
English summary :Rachita Ram

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...