Sat,Apr20,2024
ಕನ್ನಡ / English

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂಸ್

26 Nov 2021
3088

ನವದೆಹಲಿ : ಕುಟುಂಬ ಆಧಾರಿತ ಪಕ್ಷ ಸಂವಿದಾನದ ವಿರುದ್ಧವಾಗಿದೆ, ಎಂದು ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಸಂವಿದಾನ ದಿನದ ಕುರಿತು ತಮ್ಮ ಭಾಷಣದಲ್ಲಿ ಮಾತನಾಡುತ್ತಿದ್ದರು.

ರಾಜನೀತಿಯ ದಳ ಪಾರ್ಟಿ ಫಾರ ದಿ ಫ್ಯಾಮಿಲಿ(ಕುಟುಂಬಕ್ಕಾಗಿ ಪಕ್ಷ), ಪಾರ್ಟಿ ಬೈ ಫ್ಯಾಮಿಲಿ(ಕುಟುಂಬದಿಂದ ಪಕ್ಷ)... ಇದರ ಮುಂದೆ ನನಗೆ ಏನು ಹೇಳುವ ಅಗತ್ಯವಿಲ್ಲ. ಕಾಶ್ಮೀರಿ ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಯಾವುದೇ ರಾಜನೀತಿಯ ಪಕ್ಷವನ್ನು ನೋಡಿ ಇದು ಲೋಕ ತಂತ್ರದ ಭಾವನೆಯ ವಿರುದ್ಧವಾಗಿದೆ.

ಇದು, ಸಂವಿಧಾನ ನಮಗೆ ಏನು ಹೇಳುತ್ತದೆ, ಅದರ ವಿರುದ್ಧವಾಗಿದೆ. ಮತ್ತು ಯಾವಾಗ ನಾನು ಪಾರಿವಾರಿಕ ಪಾರ್ಟಿ ಎಂದು ಹೇಳುತ್ತೇನೆ, ಅದರ ಅರ್ಥ ಒಂದು ಪರಿವಾರದಲ್ಲಿ ಒಬ್ಬರಿಗಿಂತ ಹೆಚ್ಚು ಸದಸ್ಯರು ರಾಜಕೀಯಕ್ಕೆ ಬರಬಾರದು ಎಂದು ಅರ್ಥವಲ್ಲ, ಅಲ್ಲವೇ ಅಲ್ಲ.

ಯೋಗ್ಯತೆಯ ಆಧಾರದ ಮೇಲೆ, ಜನರ ಆಶೀರ್ವಾದದಿಂದ ಒಂದು ಕುಟುಂಬದಿಂದ ಒಂದಕ್ಕೂ ಅಧಿಕ ಜನರು ರಾಜನೀತಿಗೆ ಬರಲಿ. ಇದರಿಂದ ಆ ಪಕ್ಷ ಒಂದು ಪರಿವಾರಕ್ಕೆ ಸೇರಿ ಬಿಡುವುದಿಲ್ಲ. ಆದರೆ, ಕೆಲವೊಂದು ಪಕ್ಷಗಳನ್ನು ಪೀಳಿಗೆಯಿಂದ-ಪೀಳಿಗೆಗೆ ಒಂದೇ ಕುಟುಂಬ ನಡೆಸುತ್ತಿದ್ದರೆ, ಪಾರ್ಟಿಯ ಎಲ್ಲಾ ವ್ಯವಸ್ಥೆ ಒಂದೇ ಕುಟುಂಬದ ಕೈಯಲ್ಲಿದ್ದರೆ, ಅದು ಲೋಕ ತಂತ್ರದ ಅವಸ್ಥೆಗೆ ಸಂಕಟ ವಾಗಿರುತ್ತದೆ, ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

ಸಂವಿಧಾನದ ದಿನವಾದ ಇಂದು ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು ಮುಂಬೈ ಭಯೋತ್ಪಾದಕ ದಾಳಿಯನ್ನು ಸ್ಮರಿಸಿದ್ದು, ಇಂದು ನಮಗೆ ಒಂದು ದುಃಖಕರ ದಿನ ಇದೇ ದಿನದಂದು ನಮ್ಮ ದೇಶದ ಶತ್ರುಗಳು ನಮ್ಮ ದೇಶದ ಒಳಗಡೆ ಬಂದು ಭಯೋತ್ಪಾದಕ ಚಟುವಟಿಕೆ ನಡೆಸಿದ್ದರು. ಅಂದು ಭಯೋತ್ಪಾದಕರೊಂದಿಗೆ ಹೋರಾಡುತ್ತಾ ತಮ್ಮ ಸರ್ವೋಚ್ಚ ಬಲಿದಾನ ನೀಡಿದ ನಮ್ಮ ಯೋಧರನ್ನು ನಾನು ಇಂದು ನಮ್ಮ ನಮಿಸುತ್ತೇನೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರು ತಮ್ಮ ಪುಸ್ತಕದಲ್ಲಿ 26/11ರ ಕರಾಳ ದಿನದ ಬಗ್ಗೆ ಪ್ರಸ್ತಾಪಿಸಿ ಮುಂಬೈ ದಾಳಿಗೆ ಕಾರಣವಾದ ಪಾಕಿಸ್ತಾನದ ವಿರುದ್ಧ ಅಂದಿನ ಕಾಂಗ್ರೆಸ್ ನೇತ್ರತ್ವದ ಸರ್ಕಾರ ಸರಿಯಾದ ಪ್ರತಿಕ್ರಿಯೆ ನೀಡುವಲ್ಲಿ ವಿಫಲವಾಯಿತು, ಎಂದು ಟಿಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

RELATED TOPICS:
English summary :Family based parties against constitutions - Pm Modi takes on family party

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...