Sun,May12,2024
ಕನ್ನಡ / English

ಹೊರ ವರ್ತುಲ ರಸ್ತೆಯ ಒಂದು ಭಾಗಕ್ಕೆ ನಾಮಕರಣ : ಈಗ ಇದು ಶ್ರೀ ಪುನೀತ್ ರಾಜ್ ಕುಮಾರ್ ರಸ್ತೆ | ಜನತಾ ನ್ಯೂಸ್

17 Feb 2022
2743

ಬೆಂಗಳೂರು : ನಗರದ ಜೀವನಾಡಿಯಾದ ಹೊರ ವರ್ತುಲ ರಸ್ತೆ ಅಥವಾ ಔಟರ್ ರಿಂಗ್ ರೋಡ್ ನ ಒಂದು ಭಾಗಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.

ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆ ಜಂಕ್ಷನ್ ವರೆಗಿನ ಒಟ್ಟು 12 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆಗೆ ಶ್ರೀ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಾಮಕರಣ ಮಾಡಿ ಗೌರವ ಸಲ್ಲಿಸಲು ಬೃಹತ್ ಬೆಂಗಳೂರು‌ ಮಹಾನಗರ ಪಾಲಿಕೆ(ಬಿಬಿಎಂಪಿ) ಪಾಲಿಕೆ ಕೌನ್ಸಿಲ್ ನಿರ್ಣಯ ಮಾಡಿದೆ.

ಹೊರ ವರ್ತುಲ ರಸ್ತೆಯ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ಜಂಕ್ಷನ್ ವರೆಗಿನ 12 ಕಿ.ಮೀ. ಉದ್ದದ ಭಾಗಕ್ಕೆ ಶ್ರೀ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅಧಿಕೃತ ಅನುಮೋದನೆ ನೀಡಿದ್ದಾರೆ.

ಇದಕ್ಕೂ ಮೊದಲು ಹೊರ ವರ್ತುಲ ರಸ್ತೆಯ ಮೊದಲಾರ್ಧ ಭಾಗ ಅಂದರೆ, ಡಾ.ರಾಜಕುಮಾರ್, ಧರ್ಮಪತ್ನಿ ಪಾರ್ವತಮ್ಮ ರಾಜಕುಮಾರ್ ಮತ್ತು ಸುಪುತ್ರ ಪುನೀತ್ ರಾಜಕುಮಾರ್ ಮೂವರೂ ಅಭಿಮಾನಿಗಳ ದೇವರುಗಳ ಸಮಾಧಿಗಳು ಇರುವ ಹೊರ ವರ್ತುಲ ರಸ್ತೆಯ ಗೊರಗುಂಟೆಪಾಳ್ಯದಿಂದ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ವರೆಗಿನ ಭಾಗಕ್ಕೆ ಡಾ.ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ ಎಂದು ಬಿಬಿಎಂಪಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಅಧಿಕೃತವಾಗಿ ರಸ್ತೆಯ ನಾಮಕರಣ ಮಾಡಲಾಗಿತ್ತು.

ಪುನೀತ್ ರಾಜ್ ಕುಮಾರ್ ರಸ್ತೆ ಮಾರ್ಗ
ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಆರಂಭಗೊಂಡು ಹೊಸಕೆರೆಹಳ್ಳಿ<->ದೇವೇಗೌಡ ಪೆಟ್ರೋಲ್ ಬಂಕ್<-> ಕದಿರೇನಹಳ್ಳಿ ಪಾರ್ಕ್<–>ಕನಕಪುರ ರಸ್ತೆ<–>ಜೆ.ಪಿ.ನಗರ ಮಾರ್ಗದ ಮೂಲಕ ಬನ್ನೇರುಘಟ್ಟ ರಸ್ತೆಯ ಜಂಕ್ಷನ್ ತನಕ ಒಟ್ಟು ರಸ್ತೆ ಮಾರ್ಗವು ಎರಡು ಲೋಕಸಭಾ ಕ್ಷೇತ್ರಗಳು, ಆರು ವಿಧಾನಸಭಾ ಕ್ಷೇತ್ರ ಮತ್ತು 14 ಬಿಬಿಎಂಪಿ ವಾರ್ಡ್ ಗಳನ್ನು ಹಾದುಹೋಗುತ್ತಿರುವುದು ವಿಶೇಷ.

RELATED TOPICS:
English summary : Nomenclature for a section of Outer Circle Road: Now it is Sri Puneet Raj Kumar Road

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...