ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂಸ್

ಬೆಂಗಳೂರು : 15-20 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಮುಚ್ಚಿದರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಸಲಹೆ ಮಾಡಿದರು.
ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಭಾರೀ ಪ್ರಮಾಣದಲ್ಲಿ ಏರುತ್ತಿರುವ ಕಾರಣ ಮುಂದಿನ 15-20 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಮುಚ್ಚಿದರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಸಲಹೆ ಮಾಡಿದರು. ಶಾಲಾ ಕಾಲೇಜು, ವಸತಿ ನಿಲಯಗಳನ್ನು ಕೆಲ ಕಾಲ ಬಂದ್ ಮಾಡುವುದು ಒಳ್ಳೆಯದು. ಇಲ್ಲವಾದರೆ ಮಕ್ಕಳು, ವಿದ್ಯಾರ್ಥಿಗಳು ಸಮಸ್ಯೆಗೆ ತುತ್ತಾಗಬೇಕಾಗುತ್ತದೆ ಎಂದರು.
ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯಿಂದ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಈ ಕರ್ಫ್ಯೂ ಬಗ್ಗೆ ಬಿಜೆಪಿ ಮುಖಂಡರಲ್ಲೇ ಕೆಲವು ಗೊಂದಲಗಳಿವೆ ಎಂದರು. ರಾತ್ರಿ ಕರ್ಫ್ಯೂ ಬಗ್ಗೆ ಬಿಜೆಪಿ ಹಾಗೂ ಸರಕಾರದ ನಡುವೆ ಗೊಂದಲ ಇದ್ದು, ಇದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಅವರು ಆಡಳಿತ ಪಕ್ಷಕ್ಕೆ ಚಾಟಿ ಬೀಸಿದರು.
ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ .ಕಾರಣ ಸರ್ಕಾರದ ಈ ರೀತಿ ನಿಲುವುಗಳಿಂದ. ಘೋಷಣೆ ಮಾಡಿರೋ ಪ್ಯಾಕೇಜ್ ಗಳು ಬಡವರಿಗೆ ತಲುಪಬೇಕು ಎಂದ ಅವರು,ವ್ಯಾಕ್ಸಿನೇಷನ್ ನಿಂದಾಗಿ ಒಳ್ಳೆದಾಗಿದೆ. ವ್ಯಾಕ್ಸಿನೇಷನ್ ಪಡೆದವರಿಗೆ ಮತ್ತೆ ಕೊರೋನಾ ಬಂದರೆ ಅಷ್ಟೊಂದು ಪರಿಣಾಮ ಬೀರುತ್ತಿಲ್ಲ . ವ್ಯಾಕ್ಸಿನೇಷನ್ ನಲ್ಲಿ ಅಕ್ರಮ ನಡೆಯುತ್ತಿದ್ದರೆ ಅದನ್ನ ಸರ್ಕಾರ ತಡೆಗಟ್ಟಬೇಕು ಎಂದು ಆಗ್ರಹಿಸಿದರು.