ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂಸ್

19 Jan 2022
722

ಲುಧಿಯಾನ : ದೇಶದ ಜಾರಿ ನಿರ್ದೇಶನಾಲಯ(ಇಡಿ) ಇಂದು ಬುಧವಾರ ಪಂಜಾಬ್ ನಲ್ಲಿ ನಡೆಸಿದ ದಾಳಿಯಲ್ಲಿ ಮರಳು ಮಾಫಿಯಾ ಭೂಪಿಂದರ್ ಸಿಂಗ್ ಹನಿ ಅವರ ವಸತಿ ಆವರಣದಿಂದ 3.9 ಕೋಟಿ ರೂ. ಜಪ್ತಿ ಮಾಡಿದೆ. ಇಲ್ಲಿಯವರೆಗೆ ಒಟ್ಟು 10.7 ಕೋಟಿ ರೂಪಾಯಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇಂದು ಎರಡನೇ ದಿನ ಮುಂದುವರೆದ ಶೋಧ ಕಾರ್ಯಾಚರಣೆಯನ್ನು ನಿನ್ನೆ ಬೆಳಗ್ಗೆ 7:30ರ ಸುಮಾರಿಗೆ ಆರಂಭಿಸಲಾಗಿತ್ತು.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ ಅವರ ಸಂಬಂಧಿಕ ಎನ್ನಲಾದ ಭೂಪಿಂದರ್ ಸಿಂಗ್ ಹನಿ ಅವರ ಇತರೆ ಇನ್ನೊಂದು ಸ್ಥಳದಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ 80 ಲಕ್ಷ ರೂ. ಜಪ್ತಿ ಮಾಡಲಾಗಿದೆ.

ಆಪಾದಿತ ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಸುಮಾರು ಡಜನ್ ಸ್ಥಳಗಳಲ್ಲಿ ಪ್ರಸ್ತುತ ಇಡಿ ದಾಳಿ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಎಎನ್‌ಐ ವರದಿಮಾಡಿದೆ.

ಇಡಿ ದಾಳಿಯ ವಿರುದ್ಧ ಕೇಂದ್ರ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದ್ದ ಎಎಪಿ ಈಗ ಪಂಜಾಬ್ ಸಿಎಂ ಚನ್ನಿ ವಿರುದ್ಧ ವಾಗ್ದಾಳಿ ನಡೆಸಿದೆ.

ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಪಂಜಾಬ್‌ನ ಆಮ್ ಆದ್ಮಿ ಪಾರ್ಟಿ(ಎಎಪಿ) ಸಹ-ಪ್ರಭಾರಿ ರಾಘವ್ ಚಡ್ಡಾ ಮಾತನಾಡಿ, “111 ದಿನಗಳಲ್ಲಿ ಚನ್ನಿ ಇಷ್ಟು ಸಂಪಾದಿಸಿದಾಗ, ಐದು ವರ್ಷಗಳ ಕಾಲ ಅವರು ಮುಖ್ಯಮಂತ್ರಿಯಾಗಿದ್ದರೆ ಅವರು ಎಷ್ಟು ಸಂಪಾದಿಸುತ್ತಿದ್ದರು ಎಂದು ಊಹಿಸಿ” ಎಂದು ಹೇಳಿದರು.

ಸಿಎಂ ಸಂಬಂಧಿಕರ ಮನೆಗಳಿಂದ ಸಿಕ್ಕ ಹಣವನ್ನು ಮಾಫಿಯಾದಿಂದ ಸಂಗ್ರಹಿಸಲಾಗಿದೆ ಮತ್ತು ಇದು ಪಂಜಾಬ್ ಜನರ ಲೂಟಿಯ ಸಂಕೇತವಾಗಿದೆ, ಎಂದು ಚಾಡಾ ಆರೋಪಿಸಿದ್ದಾರೆ.

RELATED TOPICS:
English summary : ED recovered 10Cr from Punjab CM relative house so far

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...