Fri,Aug12,2022
ಕನ್ನಡ / English

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ. | JANATA NEWS

23 Jun 2022
749

ಬೆಳಗಾವಿ : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ನೀಡಿದೆ.

ಬೆಳಗಾವಿಯ ಕುವೆಂಪು ನಗರದಲ್ಲಿ 2015ರ ಆಗಸ್ಟ್ 16ರಂದು ನಸುಕಿನ ಜಾವ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ಬರ್ಬರ ಹತ್ಯೆಯಾಗಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಕೊಲೆಯಾಗಿತ್ತು. ಕೊಲೆಯಾದ 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಬೆಳಗಾವಿ ಜಿಲ್ಲಾ ಎರಡನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆರೋಪಿ ಪ್ರವೀಣ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಕೊಲೆ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ಆದ್ರೆ ಹೈಕೋರ್ಟ್ ಧಾರವಾಡ ಪೀಠ ಆರೋಪಿಯನ್ನು ದೋಷಮುಕ್ತಗೊಳಿಸಿದೆ.

ಏನಿದು ಪ್ರಕರಣ?
ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ತ್ರಿವಳಿ ಕೊಲೆ ನಡೆದಿತ್ತು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧ ಕಾರಣ ಎನ್ನಲಾಗಿತ್ತು.

ಕುವೆಂಪು ನಗರದಲ್ಲಿ ವಾಸವಾಗಿದ್ದ ರೀನಾ ಮಾಲಗತ್ತಿ ಹಾಗೂ ಯುವಕ ಪ್ರವೀಣ್​​ ಭಟ್ ನಡುವೆ ಸ್ನೇಹ ಸಲುಗೆ ಬೆಳೆದಿತ್ತು. ಎರಡು ವರ್ಷದವರೆಗೆ ಇಬ್ಬರ ಮಧ್ಯೆ ಅನೈತಿಕ ಸಂಬಂಧವಿತ್ತು. ಬಳಿಕ ಪ್ರವೀಣ ಅಂತರ ಕಾಯ್ದುಕೊಳ್ಳಲು ಯತ್ನಿಸಿದಕ್ಕೆ ರೀನಾ ತಕರಾರು ತೆಗೆದರು. ತನ್ನಿಂದ ದೂರಾದರೆ ಅನೈತಿಕ ಸಂಬಂಧದ ಸಂಗತಿಯನ್ನು ಬಹಿರಂಗ ಮಾಡುತ್ತೇನೆ ಎಂದೂ ಬೆದರಿಸಿದ್ದರು. ಈ ಸಂಗತಿಯೇ ಕೊಲೆಗೆ ಕಾರಣವೆಂದು ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಾಗಿದೆತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಷ್ಟು ವಿಚಾರಣೆ ನಡೆಸಿದ್ದ, ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿ ಪ್ರವೀಣ್ ಭಟ್ ತಪ್ಪಿತಸ್ಥ ಎಂದು ಹೇಳಿತ್ತು. ಅಲ್ಲದೇ ಜೀವಾವಧಿ ಶಿಕ್ಷೆಯನ್ನೂ ಕೂಡ ನೀಡಿತ್ತು. ಎಪ್ರಿಲ್ 16, 2018 ರಂದು ರಂದು ಜೀವಾವಧಿ ಶಿಕ್ಷೆಯನ್ನ ಪ್ರಕಟಿಸಲಾಗಿತ್ತು. ಈ ತೀರ್ಪಿನ ವಿರುದ್ಧ ಪ್ರವೀಣ್ ಭಟ್, ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್, ಎಂಜಿಎಸ್ ಕಮಲ್ ಅವರಿಂದ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದ್ದಾರೆ.

RELATED TOPICS:
English summary :A man convicted of murdering a mother-of-two children and sentenced to life in prison by a district court is now acquitted.

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...