ಪಿಎಫ್ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ | JANATA NEWS

ಬೆಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಯಾರೇ ಧ್ವನಿ ಎತ್ತಿದರೂ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಸೂಚಿಸಿದಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ರಾಜ್ಯಗಳಿಗೆ ಕೇಂದ್ರ ಅಧಿಕಾರ ಕೊಟ್ಟಿದೆ. ರಾಜ್ಯಕ್ಕೆ ಅಧಿಕಾರ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆ ನಾವು ಮಾಡುತ್ತೇವೆ. ಮುಂದಿನ ಪ್ರಕ್ರಿಯೆಗಳು ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಪಿಎಫ್‍ಐ ಸೇರಿದಂತೆ ಅದರ ಎಂಟು ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಯಾವುದೇ ಗಲಾಟೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
RELATED TOPICS:
English summary :Whoever raises voice in favor of PFI will be prosecuted: Araga Gyanendra