ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ | JANATA NEWS

ಹುಬ್ಬಳ್ಳಿ : ಕಾಂಗ್ರೆಸ್ ನವರಿಗೆ ಪಿಎಫ್‌ಐ ಸಂಘಟನೆ ನಿಷೇಧ ಒಳಗೊಳಗೆ ಕುದಿಯುತ್ತಿದೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ
ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ಕಂಡು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ. ಆದರೆ, ಪಿಎಫ್ ಐ ಭಯೋತ್ಪಾದಕ ಚಟುವಟಿಕೆಗಳು, ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ ... ಅದಿಕ್ಕೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
RELATED TOPICS:
English summary :PFI ban is boiling inside for Congress, unable to oppose, RSS is pushing for ban