Fri,Mar31,2023
ಕನ್ನಡ / English

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ | JANATA NEWS

29 Jan 2023
447

ಬೆಳಗಾವಿ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಾನು ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ವೈ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಈಗಾಗಲೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ಕಟ್ಟಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.

ಬಿ.ವೈ.ವಿಜಯೇಂದ್ರ ಕೂಡ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಪುತ್ರ ವಿಜಯೇಂದ್ರ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ. ವಿಜಯೇಂದ್ರ ಜೊತೆ ನಾನು ಓಡಾಡುತ್ತಿದ್ದೇನೆ. ನಾನೇನು ರಾಜಕೀಯ ನಿವೃತ್ತಿ ಪಡೆದಿಲ್ಲ. ದೇವರು ಶಕ್ತಿ ನೀಡಿದರೇ ಮುಂದಿನ ಚುನಾವಣೆಯಲ್ಲೂ ಓಡಾಡುತ್ತೇನೆ ಎಂದು ಹೇಳಿದರು.

ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ನಾವೆಲ್ಲರೂ ಕುಳಿತು ಚರ್ಚೆ ಮಾಡಿ ನಂತರವೇ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಒಂದಲ್ಲ, ಎರಡು ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ. ಇದರಲ್ಲಿ ನಾವು ಯಾವುದೇ ಕಾಂಪ್ರಮೈಸ್ ಮಾಡುವುದಿಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕುತ್ತೇವೆ. ಗೆಲ್ಲುವ ಪಕ್ಷಕ್ಕೆ, ಅಧಿಕಾರ ರಚಿಸುವ ಪಕ್ಷಕ್ಕೆ ಆಕಾಂಕ್ಷಿಗಳ ಸಂಖ್ಯೆಯೂ ಬಹಳಷ್ಟು ಇರುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ. ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ನನ್ನನ್ನು ಕೇಂದ್ರಕ್ಕೆ ಆಹ್ವಾನಿಸಿದ್ದರು. ಪಕ್ಷ ರಾಜ್ಯದಲ್ಲಿ ನನಗೆ ಎಲ್ಲ ಸ್ಥಾನಮಾನ, ಅಧಿಕಾರ, ಗೌರವ ನೀಡಿದೆ. ಋಣ ತೀರಿಸುವ ಜವಾಬ್ದಾರಿ ನನ್ನದು, ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದು ತಿಳಿಸಿದರು.

RELATED TOPICS:
English summary :I will not contest in the next assembly elections: BS Yeddyurappa

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...