ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು | JANATA NEWS

ಬೆಂಗಳೂರು : ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರು ನೀರುಪಾಲಾದ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಇಂದು ಮಧ್ಯಾಹ್ನ ಇಲ್ಲಿನ ಸ್ವಿಮ್ಮಿಂಗ್ ಪೂಲ್ಗೆ ತೆರಳಿದ್ದರು. ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MNC ಅಕಾಡೆಮಿಯಲ್ಲಿ ಈಜು ತರಬೇತಿ ನೀಡುತ್ತಿದ್ದು, ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಮಾರು 10-11 ವರ್ಷ ವಯಸ್ಸಿನ ಇಬ್ಬರು ಬಾಲಕರು 100 ರೂಪಾಯಿ ಕೊಟ್ಟು ಈಜಲು ಹೋಗಿದ್ದರು. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.
English summary :The death of two students of a private school who went down to swim in the swimming pool