Fri,Apr26,2024
ಕನ್ನಡ / English

ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್ | JANATA NEWS

29 Mar 2023
2219

ಮೈಸೂರು : ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್​ ಅಥವಾ ಹೊಂದಾಣಿಕೆ ಮಾಡಿಕೊಳ್ಳುವ ಸೂಚನೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದೇ ನನ್ನ ಕೊನೆ ಚುನಾವಣೆ, ಇದೇ ಕೊನೆ ಚುನಾವಣೆ . ಈ ಚುನಾವಣೆ ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ. ಹುಟ್ಟೂರಿನ ಕ್ಷೇತ್ರದಿಂದಲೇ ಸ್ಪರ್ಧಿಸಿ ನಿವೃತ್ತಿಯಾಗಬೇಕೆಂಬುದು ನನ್ನ ಬಯಕೆ. ಹೀಗಾಗಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದಿದ್ದಾರೆ.

ಕೋಲಾರದ ಜನ ಒತ್ತಾಯದಿಂದ ಕರೆಯುತ್ತಿರುವ ಕಾರಣ ಅಲ್ಲೂ ನಿಲ್ಲಲು ಟಿಕೆಟ್ ಕೊಡಿ ಎಂದು ಕೇಳಿದ್ದೇನೆ. ಅಂತಿಮ ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟದ್ದು‌. ನನಗೆ ಕ್ಷೇತ್ರ ಇಲ್ಲ ಎನ್ನುವುದೆಲ್ಲಾ ಅರ್ಥ ಇಲ್ಲದ ಮಾತು. ನನಗೆ 25 ಕ್ಷೇತ್ರದಲ್ಲೂ ಗೆಲ್ಲುವ ಅವಕಾಶ ಇರುವ ಕಾರಣ ನನಗೆ ಆಹ್ವಾನಿಸುತ್ತಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಕಳೆದ ಬಾರಿಯಂತೆ ಈ ಬಾರಿಯೂ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವ ಸೂಚನೆ ಇದೆ. ಹಳೇ ಮೈಸೂರು ಹೊಸ ಮೈಸೂರು ಎಂದೇನಿಲ್ಲ. ಅವರು ಎಲ್ಲ ಕಡೆಯೂ ಫಿಕ್ಸಿಂಗ್ ಮಾಡಿಕೊಳ್ಳಬಹುದು. ನನ್ನ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ನಾನು ಅದಕ್ಕೆ ಹೆದರುವುದಿಲ್ಲ ಎನ್ನುವ ಮೂಲಕ ವರುಣದಿಂದ ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಯಾರೇ ನಿಂತರೂ ನಾನು ಗೆದ್ದೆ ಗೆಲ್ಲುತ್ತೇನೆ. ಕಳೆದ ಚುನಾವಣೆಯಲ್ಲಿ ಸೋತ ಬಳಿಕ ರಾಹು-ಕೇತುಗಳು ಒಂದಾದವು ಎಂದು ನಾನು ಹೇಳಿದ್ದೆ. ಆದರೆ, ಈಗ ನಾನು ಆ ಪದ ಬಳಸುವುದಿಲ್ಲ. ಬಳಸಿದರೆ ಅವರು ಈಗ ಸಿಟ್ಟಾಗುತ್ತಾರೆ. ನಾನು ಈ ಬಾರಿ ಗೆಲ್ಲುತ್ತೇನೆ. ಜನ ನನ್ನ ಪರವಾಗಿ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಎರಡನೇ ಪಟ್ಟಿ ಒಂದೆರೆಡು ದಿನದಲ್ಲಿ ಬಿಡುಗಡೆಯಾಗುತ್ತದೆ. ಇವತ್ತು ಸ್ಕ್ರೀನಿಂಗ್ ಕಮಿಟಿ ಸಭೆ ಇದೆ. ಸಭೆ ಮುಗಿಸಿ ಅದನ್ನು ಹೈಕಮಾಂಡ್​ಗೆ ಕಳುಹಿಸುತ್ತೇವೆ. ಆ ನಂತರ ಪಟ್ಟಿ ಬಿಡುಗಡೆಯಾಗುತ್ತದೆ‌. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಗಾಳಿ ಬೀಸುತ್ತಿದೆ. ಹೀಗಾಗಿ ಟಿಕೆಟ್​ಗಾಗಿ ಸಾಕಷ್ಟು ಜನರು ಪೈಪೋಟಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬಹಳ ದೊಡ್ಡ ಮಟ್ಟದಲ್ಲಿ ಇರುವುದು ಸತ್ಯ ಎಂದು ಹೇಳಿದರು.

RELATED TOPICS:
English summary :JDS-BJP match fixing this time like last time

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...