ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ | JANATA NEWS

ಧಾರವಾಡ : ಸರ್ಕಾರಿ ಪ್ರಾಥಮಿಕ ಶಾಲೆಯ 36 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥಯಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ನೀಡಿದಾಗ, ಅನ್ನದಲ್ಲಿ ಹಲ್ಲಿಯಂತ ಹುಳು ಕಂಡುಬಂದ್ದರಿಂದ, ಊಟ ಸೇವಿಸಿದ ಸುಮಾರು 36 ಮಕ್ಕಳಲ್ಲಿ ವಾಂತಿ, ವಾಕರಿಕೆ ಕಂಡುಬಂದಿತು.
ಘಟನೆ ಬೆಳಕಿಗೆ ಬಂದ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ಶಲವಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಳೀಯ ಆರೋಗ್ಯಾಧಿಕಾರಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ, ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಸಮೀಪದ ತಾಲೂಕು ಆಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸಿಬ್ಬಂದಿಗಳ ಮೇಲೆ ಆರೋಗ್ಯಾಧಿಕಾರಿಗಳು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗುಡಿಸಾಗರ ಪ್ರಾಥಮಿಕ ಶಾಲೆಗೆ ಇಂದು ಮದ್ಯಾಹ್ನದ ಪೂರೈಸಿದ ಊಟದಲ್ಲಿ ಹಲ್ಲಿಯಂತ ಹುಳು ಕಂಡು ಬಂದಿದ್ದರಿಂದ, ಊಟ ಮಾಡಿದ್ದ ಕೆಲವು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಬಿಸಿದ್ದಾರೆ. ಕೆಲವು ಮಕ್ಕಳು ಹೆದರಿಕೆಯಿಂದ ವಾಕರಿಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.