ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ? | JANATA NEWS

ಬೆಂಗಳೂರು : ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಕೇಂದ್ರ ಸರ್ಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ 'ದಹಿ' ಎಂಬ ಪದ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು, ತಾಕತ್ತಿನ ಪ್ರದರ್ಶನವೇ ಎಂದು ಪ್ರಶ್ನಿಸಿದ್ದಾರೆ.
ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಹೇಳಿದ್ದಾರೆ.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ.1/9#StopHindiImposition pic.twitter.com/fgAAeZURPQ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 30, 2023