ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು | JANATA NEWS

ಮಂಗಳೂರು : ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಐರಿನ್ ಡಿಸೋಜಾ (65) ಮೃತ ದುರ್ದೈವಿಯಾಗಿದ್ದಾರೆ. ಅವರು ಸರಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬಂದು ಇಳಿದ ಐರಿನ್ ಡಿಸೋಜಾ ರಸ್ತೆ ದಾಟಲು ಮುಂದಾಗಿದ್ದಾರೆ.
ಈ ವೇಳೆ ವೇಗವಾಗಿ ಬರುತ್ತಿದ್ದ ಬಸ್, ಐರಿನ್ ಡಿಸೋಜಾಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗದ ಚಕ್ರ ಮಹಿಳೆಯ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಬಸ್ ಸಹಿತವಾಗಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಅಸುನೀಗಿದ್ದಾರೆ. ಪರಾರಿಯಾಗಿರುವ ಬಸ್ ಬಗ್ಗೆ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.