Wed,Sep27,2023
ಕನ್ನಡ / English

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ? | JANATA NEWS

31 May 2023
750

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ-2023ರಲ್ಲಿ 123 ಸೀಟು ಗೆಲ್ಲದೆ ಇದ್ದರೆ ನಮ್ಮ ಜೆಡಿಎಸ್ ಪಕ್ಷವನ್ನು ವಿಸರ್ಜಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದರು.

ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಜೆಡಿಎಸ್‌ ಪಕ್ಷವನ್ನು ಯಾವಾಗ ವಿಸರ್ಜಿಸುತ್ತೀರಿ ಎಂಬ ಪ್ರಶ್ನೆಗಳಿಗೆ ಮಾಜಿ ಮುಖ್ಯಮಂತ್ರಿಗಳು ಫುಲ್‌ ಸ್ಟಾಪ್‌ ಹಾಕುವ ಪ್ರಯತ್ನವನ್ನು ಮಾಡಿದ್ದಾರೆ.

ಈ ಬಗ್ಗೆ ಇಂದು ಸರಣಿ ಟ್ವಿಟ್ ಮಾಡಿರುವಂತ HDK, ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ ಎಂದು ತಿಳಿಸಿದ್ದಾರೆ.

ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು ಎಂದು ಹೇಳಿದ್ದಾರೆ.

ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನ ಎಂದು ಟಾಂಗ್ ನೀಡಿದ್ದಾರೆ.

RELATED TOPICS:
English summary :Do you know what HD Kumaraswamy said to the question of when the dissolution of JDS?

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...