5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ | JANATA NEWS

ಬೆಂಗಳೂರು : ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಜಾರಿಗೆ ತರುವ ಸಂಬಂಧ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ, ಎಂದು ಡಿಸಿಎಂ ಡಿಕೆ.ಶಿವಕುಮಾರ ಅವರು ಹೇಳಿದ್ದಾರೆ.
ಕಾಂಗ್ರೆಸ್ ಘೋಷಿಸಿರುವ ಮಹತ್ವದ 5 ಗ್ಯಾರಂಟಿಗಳ ಸಾಧಕ - ಬಾಧಕಗಳು ಹಾಗೂ ಮಾರ್ಗಸೂಚಿಗಳ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಾಯಿತು.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಶಿವಕುಮಾರ ಅವರು, ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಶುಕ್ರವಾರ ಕ್ಯಾಬಿನೆಟ್ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಲಾಗುವುದು. ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡದಂತೆ ನಾನು ಮನವಿ ಮಾಡುತ್ತಿದ್ದೇನೆ.
ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.
— DK Shivakumar (@DKShivakumar) May 31, 2023
ಶುಕ್ರವಾರ ಕ್ಯಾಬಿನೆಟ್ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಲಾಗುವುದು. ಗ್ಯಾರಂಟಿಗಳನ್ನು…