Sat,Apr27,2024
ಕನ್ನಡ / English

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್ | JANATA NEWS

25 Mar 2024
2126

ನ್ಯೂಯಾರ್ಕ್ : ಖಲಿಸ್ತಾನಿ ಗುಂಪುಗಳು ಆಮ್ ಆದ್ಮಿ ಪಕ್ಷಕ್ಕೆ 2014-2022ರ ನಡುವೆ $16 ಮಿಲಿಯನ್ ಹಣವನ್ನು ನೀಡಿವೆ, ಎಂದು ಯುಎಸ್ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹೇಳಿಕೊಂಡಿದ್ದಾರೆ. ಹಣದ ಬದಲಾಗಿ ಭಯೋತ್ಪಾದಕ ಭುಲ್ಲರ್‌ನನ್ನು ಬಿಡುಗಡೆ ಮಾಡಲು ಕೇಜ್ರಿವಾಲ್ ಮುಂದಾದರು ಎಂದು ಪನ್ನುನ್ ಹೇಳಿಕೊಂಡಿದ್ದಾರೆ. ಭುಲ್ಲರ್ 1993ರ ದೆಹಲಿ ಬಾಂಬ್ ಸ್ಫೋಟದ ಅಪರಾಧಿಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿರುವ ವೀಡಿಯೊದಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು $16 ಮಿಲಿಯನ್ ಬದಲಾಗಿ ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ನನ್ನು ಬಿಡುಗಡೆ ಮಾಡಲು ಪ್ರಸ್ತಾಪಿಸಿದ್ದಾರೆ, ಎಂದು ಭಯೋತ್ಪಾದಕ ಪನ್ನುನ್ ಹೇಳಿದ್ದಾರೆ. ಭುಲ್ಲರ್ 1993 ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿದ್ದು, ಈ ಸ್ಪೋಟದ ಪರಿಣಾಮವಾಗಿ ಒಂಬತ್ತು ಸಾವುಗಳು ಮತ್ತು 31 ಮಂದಿ ಗಾಯಗೊಂಡಿದ್ದರು.

ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಪ್ರಕಾರ 2014 ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯೂಯಾರ್ಕ್ ನ ರಿಚ್‌ಮಂಡ್ ಹಿಲ್ಸ್‌ ಗುರುದ್ವಾರ ದಲ್ಲಿ ಖಲಿಸ್ತಾನ್ ಪರ ಸಿಖ್ಖರೊಂದಿಗೆ ಸಭೆ ನಡೆಸಿದ್ದಾರೆ. ಅಲ್ಲಿ ಕೇಜ್ರಿವಾಲ್ ಅವರು ಭಯೋತ್ಪಾದಕ ಭುಲ್ಲರ್‌ನನ್ನು ಆರ್ಥಿಕ ಸಹಾಯಕ್ಕಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ, ಎಂದು ಹೇಳಿಕೊಳ್ಳುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಅಬಕಾರಿ ನೀತಿ "ಹಗರಣ"ದಲ್ಲಿ ಬಂಧಿಸಿದ್ದು, ಇನ್ನೂ ಇಡಿ ವಶದಲ್ಲೇ ಇಟ್ಟುಕೊಂಡಿದೆ. ಬಂಧನದಿಂದ ರಕ್ಷಣೆ ಕೋರಿ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಮಾರ್ಚ್ 28ರವರೆಗೆ ಕೇಜ್ರಿವಾಲ್ ರನ್ನು ಇಡಿ ಕಸ್ಟಡಿಗೆ ನೀಡಿದೆ.

ಆದರೆ, ಬಂಧನದಲ್ಲಿರುವಾಗಲೂ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಎಎಪಿ ನಿರ್ಧರಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಅದರ ಸಂಚಾಲಕರಿಗೆ ಪ್ರಚಾರ ಮಾಡಲು ಸಾಧ್ಯವಾಗದ ಕಾರಣ ಪಕ್ಷವು "ಮೈ ಭಿ ಕೇಜ್ರಿವಾಲ್" ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

English summary :Delhi CM Kejriwal received $16 million from Khalistani groups for release of terrorist

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...