Tue,Apr30,2024
ಕನ್ನಡ / English

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ! | JANATA NEWS

31 Mar 2024
1415

ಬೆಂಗಳೂರು : ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ಸಂಸದೆ ಸುಮಲತಾ ಅವರ ನಿವಾಸಕ್ಕೆ ಭೇಟಿ ನೀಡಿದರು. ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್ ಅವರು ಹಾಜರಿದ್ದರು.

ಸುಮಲತಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್‌ಡಿಕೆ, ಇವತ್ತಿನ ಮಾತುಕತೆ ಸೌಹಾರ್ದಯುತವಾಗಿ ಆಗಿದೆ. ಮಾತುಕತೆ ವೇಳೆ ಯಾವುದೇ ಷರತ್ತು ಹಾಕಿಲ್ಲ ಎಂದು ಹೇಳಿದ್ದಾರೆ.

ಇಂದು ಭಾನುವಾರ ಜೆಪಿ ನಗರದ ಸಂಸದೆ ಸುಮಲತಾ ಅವರ ಮನೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಈ ವೇಳೆ ಅವರನ್ನು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಪುತ್ರ ಅಭಿಷೇಕ್ ಅಂಬರೀಶ್ ಸ್ವಾಗತಿಸಿದರು. ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ನಾಯಕ ಟಿಎ ಶರವಣ ಸಹ ಇದ್ದರು.

ಸುಮಲತಾ ಭೇಟಿ ಬಳಿಕ ಸುದ್ದಿಗಾರ ಜೊತೆಗೆ ಎಚ್‌ಡಿ ಕುಮಾರಸ್ವಾಮಿ ಅವರು, ಸುಮಲತಾ ಅವರ ನಿವಾಸಕ್ಕೆ ತೆರಳಿ ಬೆಂಬಲ ಕೇಳಿದ್ದೇನೆ. ಇಂದಿನ ಭೇಟಿ ಇದು ಸೌಹಾರ್ದಯುತ ಭೇಟಿ ಆಗಿದೆ. ನಾನು ಅಂಬರೀಶ್ ಅವರು ರಾಜಕಾರಣಲ್ಲಿ ಒಟ್ಟೊಟ್ಟಿಗೆ ಬೆಳೆದವರು. ಅವರ ಸಹಕಾರ ಕೇಳಿದ್ದೇನೆ. ಅವರು ಏಪ್ರಿಲ್ 3ರಂದು ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ನಾನು ಮಂಡ್ಯದಲ್ಲಿ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಈ ನಿಟ್ಟಿನಲ್ಲಿ ನಾನು ಅವರು ಸಹಾಯ ಕೇಳಿದ್ದೇನೆ. ಅವರ ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿ ಅವರ ಸಮ್ಮುಖದಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ. ಸುಮಲತಾ ಅವರು ಬಿಜೆಪಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ತಿಳಿಸಿದರು.

RELATED TOPICS:
English summary :Kumaraswamy met Sumalatha and sought cooperation

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ನ್ಯೂಸ್ MORE NEWS...