ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿ ಯುಎಇ ಅಧ್ಯಕ್ಷ ರಿಗೆ ಕರೆಮಾಡಿದ ಪ್ರಧಾನಿ ಮೋದಿ | JANATA NEWS
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿ, ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದರು ಮತ್ತು ದೂರವಾಣಿ ಮೂಲಕ ಜೀವಹಾನಿಗೆ ಸಂತಾಪ ಸೂಚಿಸಿದರು.
ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ "ಯುಎಇ ಅಧ್ಯಕ್ಷ, ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದ್ದೇನೆ. ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದೇನೆ ಮತ್ತು ಈ ದಾಳಿಗಳಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದೇನೆ. ಈ ಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ. ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನು ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ" ಎಂದು ಪೋಸ್ಟ್ ಮಾಡಿದ್ದಾರೆ.