Sun,May19,2024
ಕನ್ನಡ / English

ವಿಜಯಪುರದಲ್ಲಿ ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್​ಗಳು, ಮೂವರ ದಾರುಣ ಸಾವು! | Janata news

03 Oct 2020
954

ವಿಜಯಪುರ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಬಳಿಯ ದಿಂಡವಾರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬೈಕ್ ಗಳು ಹೊತ್ತಿ ಉರಿದು, ಮೂವರು ಯುವಕರು ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ಬಳಿ ನಡೆದಿದೆ.

ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಹೂವಿನ ಹಿಪ್ಪರಗಿ ಗ್ರಾಮದ ದಿಂಡವಾರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೂರು ಜನ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದರೆ, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವಿಗೀಡಾಗಿದ್ದಾನೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಯುವಕರು ಕಲಬುರ್ಗಿ ಜಿಲ್ಲೆಯ ಅಫ್ಜಲಪುರದಿಂದ ಅಂಜನಾದ್ರಿ ಬೆಟ್ಟಕ್ಕೆ ಬೈಕ್​ ಸವಾರಿ ಹೊರಟಿದ್ದರು. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಯುವಕರು ವಿರುದ್ಧ ದಿಕ್ಕಿನಿಂದ ಬಂದ ಗಾಡಿಯನ್ನು ನೋಡದೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಗುದ್ದಿದ ರಭಸಕ್ಕೆ 2 ಬೈಕ್​ಗಳು ಸುಟ್ಟು ಕರಕಲಾಗಿದ್ದು, ಇನ್ನೆರಡು ಬೈಕ್​ಗಳು ಜಖಂ ಆಗಿ ನಿಂತಿವೆ.

ಸಾವಿಗೀಡಾದವರನ್ನು ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಕುಮಾರ ಬಲಗುಂಪಿ( 22), ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಜಾಯವಾಡಗಿ ಗ್ರಾಮದ ಬಸವರಾಜ ಹಂದ್ರಾಳ (26) ಹಾಗೂ ಸಾಬಣ್ಣ ಸಿದ್ದಾಪುರ (24) ಎಂದು ಗುರುತಿಸಲಾಗಿದೆ. ಇನ್ನೊಬ್ಬನಿಗೆ ಗಂಭೀರ ಗಾಯವಾಗಿದ್ದು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸ್ಥಳದಲ್ಲಿ ಜಖಂ ಆಗಿ ನಿಂತ ಇನ್ನೆರೆಡು ಬೈಕ್ ಗಳು ನಿಂತಿದ್ದು, ವೇಗವಾಗಿ ಬಂದು ಬೈಕ್‌ಗಳು ಡಿಕ್ಕಿ ಹೊಡೆದರೂ ಸತ್ತವರಿಗೆ ಕೇವಲ ತಲೆಗೆ ಮಾತ್ರ ಗಾಯವಾಗಿದೆ. ಇನ್ನೋರ್ವನಿಗೂ ತಲೆಗೆ ಮಾತ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

English summary :Accident in Vijaypura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...