Mon,May20,2024
ಕನ್ನಡ / English

ಪ್ರಿಯಕರನ ಜೊತೆಗೂಡಿ ಗಂಡನನ್ನೇ ಕೊಲೆಗೈದ ಪತ್ನಿ! | Janata news

08 Oct 2020
845

ಚಾಮರಾಜನಗರ : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆಗೈದ ಭೀಕರ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಗ್ರಾಮದಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ರಾಘವಪುರ ಗ್ರಾಮದ ನಾಗರಾಜನಾಯ್ಕ (40) ಮೃತ ವ್ಯಕ್ತಿ. ಹೆಂಡತಿ ಪದ್ಮಾ (26) ಹಾಗೂ ಈಕೆಯ ಪ್ರಿಯಕರ ಮಣಿಕಂಠ (26) ನನ್ನು ಪ್ರಕರಣ ಸಂಬಂಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಘವಪುರ ಗ್ರಾಮದ ನಿವಾಸಿ ನಾಗರಾಜು ನಾಯಕ್ ತೊಂಡವಾಡಿ ಗ್ರಾಮದ ನಿವಾಸಿ ಪದ್ಮ ಎಂಬ ಯುವತಿಯನ್ನು ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಪದ್ಮಳಿಗೆ ಮಣಿಕಂಠ ಎಂಬುವವನ ಜೊತೆ ಪ್ರೇಮಾಂಕುರವಾಗಿತ್ತು.

ಹೀಗಾಗಿ ಪತಿ ಇದ್ದರೆ ತಮ್ಮ ಪ್ರೇಮಕ್ಕೆ ಅಡ್ಡಿಯಾಗುತ್ತೆ ಎಂದು ಪ್ರಿಯಕರ ಮಣಿಕಂಠ ಮತ್ತು ಪತ್ನಿ ಪದ್ಮ ಸೇರಿ ನಾಗರಾಜುನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್ 11ರ ಮಧ್ಯರಾತ್ರಿ ತೊಂಡವಾಡಿ ಜಮೀನೊಂದರಲ್ಲಿ ರಾಸಲೀಲೆ ಆಡುತ್ತಿದ್ದ ವೇಳೆ ಗಂಡನ ಕೈಗೆ ಇವರಿಬ್ಬರೂ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಪ್ರಿಯಕರನ ಜೊತೆಗೂಡಿ ಕಲ್ಲಿನಲ್ಲಿ ಹೊಡೆದು ಕೊಂದು ನಾಗರಾಜನಾಯ್ಕನನ್ನು ಕಳಲೆ ಕಾಲುವೆಗೆ ಬಿಸಾಡಿದ್ದಾರೆ. ಆ ಬಳಿಕ ಮೈಸೂರಿಗೆ ತೆರಳುತ್ತೇನೆಂದು ಹೋದವರು ಇನ್ನೂ ಬಂದಿಲ್ಲ ಎಂದು ಆರೋಪಿಗಳಿಬ್ಬರು ಸೆ.16ರಂದು ಬೇಗೂರು ಠಾಣೆಗೆ ದೂರು ನೀಡಿದ್ದಾರೆ.

ನಂತರ ದೂರು ದಾಖಲಾದ 24 ಗಂಟೆಯೊಳಗೆ ಬೇಗೂರು ಪೊಲೀಸರು ಆರೋಪಿ ಪದ್ಮ ಮತ್ತು ಪ್ರಿಯಕರ ಮಣಿಕಂಠನನ್ನು ಬಂಧಿಸಿದ್ದಾರೆ.

RELATED TOPICS:
English summary :Chamarajanagara

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...