Sat,May18,2024
ಕನ್ನಡ / English

ಪತಿಯ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ಬರ್ಬರ ಹತ್ಯೆ! | Janata news

16 Oct 2020
1074

ದಾವಣಗೆರೆ : ಹೆಂಡತಿಯೊಬ್ಬಳು ತನ್ನ ಗಂಡನ ಹತ್ಯೆಗೆ ಸುಪಾರಿ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಆಹಾರದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಮೂವರ ಜೊತೆ ಸೇರಿ ಪತಿಯ ಕೊಲೆ ಮಾಡಿದ ಮಹಿಳೆಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರಿನ ಬಿದರಕೆರೆ ರಸ್ತೆಯ ಅಶ್ವತರೆಡ್ಡಿ ನಗರದ ಮುಖ್ಯ ರಸ್ತೆ ಬದಿಯಲ್ಲಿ ಬೆಳ್ಳಬೆಳಗ್ಗೆ ರುಂಡ ಕತ್ತರಿಸಿದ ರೀತಿಯಲ್ಲಿ ಶವವೊಂದು ಪತ್ತೆಯಾಗಿತ್ತು. ಬೆಳಗಿನ ವಾಕಿಂಗ್‌ಗೆಂದು ಹೋದವರು ಭೀಕರವಾಗಿ ಕೊಲೆಯಾಗಿ ಬಿದ್ದ ಶವ ನೋಡಿ ಬೆಚ್ಚಿ ಬಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೊಲೆ ಪ್ರಕರಣ ಸಂಬಂಧ ಬಸವರಾಜಪ್ಪನ ಪತ್ನಿ ಭಾಗ್ಯಮ್ಮ, ಜಗಳೂರು ತಾಲ್ಲೂಕಿನ ಗುಡ್ಡದ ನಿಂಗನಹಳ್ಳಿ ಗ್ರಾಮದ ಅಂಜಿನಪ್ಪ, ಚೌಡಪ್ಪ, ಆಟೊ ಚಾಲಕ ಮಾರುತಿ ಅವರನ್ನು ಬಂಧಿಸಲಾಗಿದೆ.

ಬಸವರಾಜಪ್ಪ ಅವರಿಗೆ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇತ್ತು. ಇದನ್ನು ಪತ್ನಿ ಭಾಗ್ಯಮ್ಮ ಪ್ರಶ್ನಿಸುತ್ತಿದ್ದರು. ಇದರಿಂದ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಇದರಿಂದ ಭಾಗ್ಯಮ್ಮ ಪತಿಯ ಕೊಲೆಗೆ ಯೋಜಿಸಿದ್ದರು. ಎಗ್ ‌ರೈಸ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಜಿನಪ್ಪ, ಆಟೊ ಚಾಲಕ ಮಾರುತಿ, ಜೌಡಪ್ಪರಿಗೆ ಪತಿಯನ್ನು ಕೊಲೆ ಮಾಡಿದರೆ 1 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿ ಸಂಚು ರೂಪಿಸಿದ್ದರು ಎನ್ನಲಾಗಿದೆ.

ಗುಡ್ಡದನಿಂಗನಹಳ್ಳಿ ನಿವಾಸಿಗಳಾದ ಆಟೋ ಚಾಲಕ ಮಾರುತಿ ಹಾಗೂ ಕುರಿಗಾಹಿ ಚೌಡಪ್ಪ ಈ ಕೃತ್ಯದಲ್ಲಿ ಅಂಜನಿಗೆ ಸಾಥ್‌ ನೀಡಿದ್ದರು. ಪೂರ್ವ ನಿಯೋಜಿತ ಪ್ಲಾನ್‌ನಂತೆ, ಮೆಡಿಕಲ್‌ ಶಾಪ್‌ನಿಂದ ನಿದ್ರೆ ಮಾತ್ರೆ ಖರೀದಿ ಮಾಡಿದ್ದರು. ಮಂಗಳವಾರ ರಾತ್ರಿ ಬಸವರಾಜನಿಗೆ ಗೊತ್ತಿಲ್ಲದಂತೆ ರಾಗಿ ಮುದ್ದೆಯಲ್ಲಿ 10 ನಿದ್ರೆ ಮಾತ್ರೆ ಹಾಕಿದ್ದರು..

ನಿದ್ರೆಯ ಮಂಪರಿನಲ್ಲಿದ್ದ ಬಸವರಾಜನ್ನು ತಡರಾತ್ರಿ ಆಟೋದಲ್ಲಿ ಬಿದರಹಳ್ಳಿಗೆ ಸಾಗಿಸಿದ್ರು. ನಿದ್ರೆಯಲ್ಲಿದ್ದ ಬಸವರಾಜನ್ನು ರಸ್ತೆ ಬದಿಯಲ್ಲೇ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ರು. ಮುದ್ದೆ ತಿಂದ ಬಸವರಾಜ ನಿದ್ದೆಯಲ್ಲೇ ಶವವಾಗಿದ್ದ. ಶವವನ್ನು ಅಲ್ಲೇ ಬಿಟ್ಟು ಎಲ್ಲರೂ ತಮ್ಮತಮ್ಮ ಗೂಡು ಸೇರಿಕೊಂಡ್ರು.

RELATED TOPICS:
English summary :Davanagere

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...