Mon,May20,2024
ಕನ್ನಡ / English

ನಾನು ಯಾವತ್ತಿದ್ರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ: ಸಿದ್ದರಾಮಯ್ಯ | Janata news

26 Oct 2020
1044

ಕಲಬುರಗಿ : ನಾನು ಯಾವತ್ತಿದ್ದರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗುಡುಗಿದ್ದಾರೆ.

ತಾವು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ಧರಾಮಯ್ಯ ಕಾರಣ ಎಂಬ ಹೆಚ್​ಡಿ ಕುಮಾರಸ್ವಾಮಿ ಅವರ ಪರೋಕ್ಷ ಆರೋಪಕ್ಕೆ ಕಿಡಿಕಾರಿರುವ ಸಿದ್ದರಾಮಯ್ಯ, ನಾನು ಕೊಡೋ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತದೆ. ನಾನು ಯಾವತ್ತೂ ಹೀರೋನೇ, ವಿಲನ್ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತರೆ ಸರ್ಕಾರ ನಡೆಸೋಕಾಗುತ್ತಾ? ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಇದೇ ಕಾರಣಕ್ಕೆ ಸರ್ಕಾರಕ್ಕೆ ಧಮ್ ಇಲ್ಲ ಎಂದಿದ್ದೇನೆ. ಆದರೆ ಕೆಲವರು ಇದನ್ನು ದೈಹಿಕ ತಾಕತ್ತಿಗೆ ಹೋಲಿಸುತ್ತಿದ್ದಾರೆ. ಸಿದ್ದರಾಮಯ್ಯನಿಗಿಂತ ನಮಗೆ ನಾಲ್ಕು ಪಟ್ಟು ಧಮ್ ಇದೆ ಎಂದು ಹೇಳುತ್ತಿದ್ದಾರೆ.

ನಾನು ದೈಹಿಕ ಸಾಮರ್ಥ್ಯದ ಬಗ್ಗೆ ಮಾತಾಡಿಲ್ಲ. ಇವರಿಗೆ ಪರಿಹಾರ ಕೊಡಿಸೋ ಧಮ್ ಇಲ್ಲ ಎಂದಿದ್ದೇನೆ. ಈಗಲೂ ಧಮ್ ಇದ್ರೆ ಕೂಡಲೇ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಲಿ. ನೆರೆ ನಿರ್ವಹಣೆಯ ಬಗ್ಗೆ ಚರ್ಚೆಗಾಗಿ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಸವಾಲು ಹಾಕಿದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...