Mon,May20,2024
ಕನ್ನಡ / English

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ; ಹಲವರನ್ನು ಬಂಧಿಸಿದ ಪೊಲೀಸರು | Janata news

01 Nov 2020
1211

ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಖಂಡಿಸಿ ರವಿವಾರ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಹತ್ತಕ್ಕೂ ಹಚ್ಚು ಜನರನ್ನು ಬಂಧಿಸಲಾಯಿತು.

ನಗರದ ಸರ್ದಾರ್ ವಲ್ಲಭಭಾಯ್​ ಪಟೇಲ್ ವೃತ್ತದಲ್ಲಿ ಸೇರಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿ ಬಂಧನಕ್ಕೊಳಗಾದರು.

ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ. ನಮಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಘೋಷಣೆ ಕೂಗಿದರು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದಾಗ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಹಾಗೂ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.

janata

ಕಲ್ಯಾಣ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರಗಿಗೆ ಒಂದೂ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಸಂವಿಧಾನದ ಕಲಂ 371 ಕ್ಕೆ ತಿದ್ದುಪಡಿ ತಂದರೂ ಪ್ರಯೋಜನವಾಗುತ್ತಿಲ್ಲ.

ಈ ಭಾಗಕ್ಕೆ ಸಿಗಬೇಕಾದ ಉದ್ಯೋಗ ಮೀಸಲಾತಿಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲ್ಯಾಣ ಕರ್ನಾಟಕ ಕೇಂದ್ರ ಸ್ಥಾನ ಕಲಬುರ್ಗಿಗೆ ಒಂದೂ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

RELATED TOPICS:
English summary :Kannada Rajyotsava

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...