Sat,May11,2024
ಕನ್ನಡ / English

ಪತ್ನಿಯ ಜೀವ ತೆಗೆದ ಪತಿರಾಯ, ಯಾಕೆ ಗೊತ್ತಾ? ಜೀವನಾಂಶ ಕೇಳಿದ್ದಕ್ಕೆ ! | Janata news

23 Nov 2020
1139

ಹಾಸನ : ಜಿಲ್ಲೆಯ ಚೀರನಹಳ್ಳಿ ಬಳಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ಹಾಗೂ ಪ್ರೇಯಸಿಯನ್ನು ಬಂಧಿಸಿದ್ದಾರೆ.

ಸುಷ್ಮಿತ ಕೊಲೆಯಾದ ದುರ್ದೈವಿ. ನಾಗರಾಜ್ (28) ಬಂಧಿತ ಆರೋಪಿ ಪತಿ. ಕೊಲೆಗೆ ಸಹಕರಿಸಿದ ಪ್ರೇಯಸಿ ಶೈಲಾ (27) ಮತ್ತು ಮೋಹನ್​ (24) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

janata

ಘಟನೆ-
ನವೆಂಬರ್​ 11ರಂದು ಚೀರನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದ ವೇಳೆ ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ನಿವಾಸಿ ಸುಶ್ಮಿತಾ(26) ಎಂದು ತಿಳಿದುಬಂದಿತ್ತು.

ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೆಲಗೂರಿನಲ್ಲಿ ಸುಷ್ಮಿತಾಳನ್ನು ಕೊಲೆ ಮಾಡಿದ್ದ ನಾಗರಾಜ್, ಪತ್ನಿಯ ಶವವನ್ನು ಹಾಸನದ ದುದ್ದ ಚೀರನಹಳ್ಳಿ ಕೆರೆಗೆ ತಂದು ಎಸೆದಿದ್ದ.
ಶೈಲಾಳ ಜತೆಗಿನ ಅಕ್ರಮ ಸಂಬಂಧವೇ ಪತ್ನಿ ಸುಷ್ಮಿತಾ ಕೊಲೆಗೆ ಕಾರಣ ಎನ್ನಲಾಗಿದೆ.

6 ವರ್ಷದ ಹಿಂದೆ ಸುಶ್ಮಿತಾ ಹಾಗೂ ನಾಗರಾಜ್ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಆದರೆ ನಾಗರಾಜ್, ಇತ್ತೀಚೆಗೆ ಶೈಲಾ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಸುಶ್ಮಿತಾ ಆತನಿಂದ ದೂರವಾಗಿದ್ದಳು. ಇದಲ್ಲದೆ, ಗಂಡನಿಂದ ಜೀವನಾಂಶ ಪಡೆಯಲು ಕೇಸ್ ಸಹ ಹಾಕಿದ್ದಳು.

ನಾಗರಾಜ್​ ನಿನ್ನ ಜೊತೆ ಕೇಸ್​ ಬಗ್ಗೆ ಮಾತನಾಡಬೇಕೆಂದು ನೆಪವೊಡ್ಡಿ ಅಕ್ಟೋಬರ್​ 29ರಂದು ಪತ್ನಿಯನ್ನು ಬೆಲಗೂರಿಗೆ ಕರೆಸಿಕೊಂಡಿದ್ದ. ಅಲ್ಲಿ ತನ್ನ ಪ್ರೇಯಸಿ ಶೈಲಾ ಜೊತೆ ಸೇರಿ ನಾಗರಾಜ್ ಸುಶ್ಮಿತಾಳನ್ನು ಕೊಂದು, ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಹೊಸದುರ್ಗದಲ್ಲಿ ಕೊಲೆ ಮಾಡಿ ಹಾಸನದ ಅರಸೀಕೆರೆಯ ದುದ್ದ ಗ್ರಾಮದ ಬಳಿಯಿರುವ ಕೆರೆಗೆ ಶವ ಹಾಕಿದ್ದ.

janata

RELATED TOPICS:
English summary :Hasan

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...