Tue,May14,2024
ಕನ್ನಡ / English

ಶೀಘ್ರ ರಾಜ್ಯದಲ್ಲಿ ಲವ್‌ ಜೆಹಾದ್‌ಗೆ ಕಠಿಣ ಕಾನೂನು ಜಾರಿ: ಸಚಿವ ಬಸವರಾಜ ಬೊಮ್ಮಾಯಿ | Janata news

04 Dec 2020
957

ಉಡುಪಿ: : ಲವ್‌ ಜೆಹಾದ್‌ ಎಂಬುದು ಮತಾಂತರಕ್ಕೆ ಸುಲಭ ವಿಧಾನ ಎಂಬುದಾಗಿ ಅಲಹಾ ಬಾದ್‌ ಹೈಕೋರ್ಟ್‌ ತಿಳಿಸಿದೆ. ಈ ಆದೇಶದ ಅಧ್ಯ ಯನ ಮಾಡಿ ಶೀಘ್ರ ರಾಜ್ಯದಲ್ಲಿ ಲವ್‌ ಜೆಹಾದ್‌ ಕಾನೂನು ಜಾರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉತ್ತರ ಪ್ರದೇಶ ಸರ್ಕಾರ ಈಚೆಗೆ ಲವ್ ಜಿಹಾದ್ ಕಾನೂನು ಜಾರಿ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದ್ದು ಅದರ ಪ್ರತಿಯನ್ನು ಪಡೆದು ಪರಿಶೀಲಿಸಿ ಯಾವ ಅಂಶಗಳನ್ನು ಕಾನೂನಿನಲ್ಲಿ ಸೇರಿಸಬೇಕು ಎಂದು ಚರ್ಚಿಸಿ ನಿರ್ಧರಿಸಲಾಗುವುದು. ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ ಎಂದು ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದರು.

ಮೊಘಲರ ಕಾಲದಿಂದಲೂ ಲವ್ ಜಿಹಾದ್ ಇದೆ ಎಂದು ಹೇಳಿರುವ ಸಿದ್ದರಾಮಯ್ಯ ಇನ್ನೂ ಮೊಘಲರ ಕಾಲದಲ್ಲಿಯೇ ಇದ್ದಾರೆ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.

ಮಂಗಳೂರಿನ ಗೋಡೆಗಳಲ್ಲಿ ಕಂಡು ಬಂದ ಉಗ್ರ ಬರಹವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಡಿಸಿಪಿಗಳ ನೇತೃತ್ವದಲ್ಲೇ ರಾತ್ರಿ ಗಸ್ತು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಇರಾಕ್‌, ಇರಾನ್‌, ಈಜಿಪ್ಟ್ ‌ಸಹಿತ ಭಾರತದ ಕಾಶ್ಮೀರದಲ್ಲಿ ಭಯೋತ್ಪಾದನೆ ಪ್ರಚೋದಿಸುವ ಸಂಸ್ಥೆಗಳು ಈ ರೀತಿ ಉಗ್ರ ಪರವಾದ ಬರಹವನ್ನು ಹಾಕುತ್ತವೆ. ಅದೇ ಮಾದರಿ ಪ್ರಯತ್ನ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಇದರ ಹಿಂದಿರುವ ಕೃತ್ಯ ಬಯಲಿಗೆಳೆಯಲಾಗುವುದು ಎಂದರು.

ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ ವ್ಯಕ್ತಪಡಿಸಿ ಡಿ. 5ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ ಬಗ್ಗೆ ಮಾತನಾಡಿದ ಅವರು ಡಿ. 5ರಂದು ಬಂದ್‌ ಇಲ್ಲ. ಬಂದ್‌ ಮಾಡಿದರೆ ಕೋರ್ಟ್‌ ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ. ಬಂದ್‌ ಮಾಡಬಾರದೆಂದು ಸಂಬಂಧಪಟ್ಟವರಿಗೆ ಮನವಿ ಮಾಡಿದ್ದೇವೆ. ಆ ದಿನ ಟೋಲ್‌ಗ‌ಳಲ್ಲಿಯೂ ಭದ್ರತೆ ನಿಯೋಜನೆ ಮಾಡಲಿದ್ದೇವೆ ಎಂದರು.

RELATED TOPICS:
English summary :Basavaraj Bommai

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...