Fri,May10,2024
ಕನ್ನಡ / English

ಲಂಚ ಪ್ರಕರಣ: ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ! | Janata news

09 Dec 2020
1422

ಕಲಬುರ್ಗಿ : ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಪೊಲೀಸ್ ಅಧಿಕಾರಿ ವಿಜಯಲಕ್ಷ್ಮಿ ಮಸಾರೆ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಸೆಷನ್ಸ್​ ಕೋರ್ಟ್​ ಆದೇಶಿಸಿದೆ.

2015 ರಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಅಂದಿನ ಶಹಾಬಾದ್ ಸಿಪಿಐ ವಿಜಯಲಕ್ಷ್ಮಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರುಪಾಯಿ ದಂಡ ವಿಧಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ.ಸತೀಶ್ ಸಿಂಗ್ ತೀರ್ಪು ನೀಡಿದ್ದಾರೆ.

2015ರ ಡಿಸೆಂಬರ್‌ನಲ್ಲಿ ಶಹಾಬಾದ್ ತಾಲ್ಲೂಕಿನ ದೇವನ ತೇಗನೂರಿನ ರಾಜು ಅವರು ಶಹಾಬಾದ್‌ನ ಬಂಕ್‌ವೊಂದರಲ್ಲಿ ತಮ್ಮ ಟಾಟಾ ಸುಮೊ ವಾಹನಕ್ಕೆ ಡೀಸೆಲ್ ಹಾಕಿಸಲು ಹೋಗಿದ್ದ ಸಂದರ್ಭದಲ್ಲಿ ಬಂಕ್‌ನ ಸಿಬ್ಬಂದಿಯೊಂದಿಗೆ ಜಗಳವಾಗಿತ್ತು. ಟಾಟಾ ಸುಮೋ ವಾಹನ ಮಾಲೀಕ ರಾಜು ಎಂಬಾತನ ಬಳಿ ಸಿಪಿಐ ವಿಜಯಲಕ್ಷ್ಮಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚ ರೂಪದಲ್ಲಿ 25 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ವಿಜಯಲಕ್ಷ್ಮಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಈ ವಿಷಯವನ್ನು ಲೋಕಾಯುಕ್ತರ ಗಮನಕ್ಕೆ ತಂದಿದ್ದ ರಾಜು, ಲೋಕಾಯುಕ್ತ ಪೊಲೀಸರ ಸಲಹೆಯಂತೆ ಲಂಚದ ಹಣ ಕೊಡಲು ಮುಂದಾಗಿದ್ದರು. ವಿಜಯಲಕ್ಷ್ಮಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ಮಾಡಿದ್ದ ಸಿಬ್ಬಂದಿ ಹಣದ ಸಮೇತ ವಶಕ್ಕೆ ಪಡೆಯಲಾಗಿತ್ತು.

ಲೋಕಾಯುಕ್ತ ಪರ ಸರ್ಕಾರಿ ಅಭಿಯೋಜಕ ಅಶೋಕ್ ಚಾಂದಕವಟೆ ವಾದ ಮಂಡಿಸಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶರು ತಮ್ಮ ತೀರ್ಪನ್ನು ಪ್ರಕಟಿಸಿದ್ದಾರೆ. ಲಂಚ ಸ್ವೀಕಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

RELATED TOPICS:
English summary :Kalburgi

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...