Fri,May10,2024
ಕನ್ನಡ / English

ಬಿಎಸ್‌ವೈ ನಾಲಿಗೆ ಕಳೆದುಕೊಂಡ ನಾಯಕ, ವಿಜಯೇಂದ್ರ ದಾರಿ ತಪ್ಪಿದ ಮಗ: ವಿಶ್ವನಾಥ್‌ | Janata news

15 Jan 2021
2196

ಹುಬ್ಬಳ್ಳಿ : ಯಡಿಯೂರಪ್ಪ ಕಾಮಧೇನು ಇದ್ದಂತೆ. ಅವರ ಜೀವ ವಿಜಯೇಂದ್ರನ ಕೈಯಲ್ಲಿದೆ. ಇದೀಗ ಯಡಿಯೂರಪ್ಪ ಅವರ ಪರಿಸ್ಥಿತಿ ನೋಡಿದರೆ, ನಾಲಿಗೆ ಕಳೆದುಕೊಂಡ ನಾಯಕ, ದಾರಿ ತಪ್ಪಿದ ಮಗ ಎಂದು ತಲೆಬರಹ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೆ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಸನ್(ಪುತ್ರ) ಮತ್ತು ಫ್ಯಾಮಿಲಿ ಸ್ಟ್ರೋಕ್‌ನಿಂದ ಹಾಳಾಗಿವೆ. ಅದೇ ಹಾದಿಯಲ್ಲಿ ಈಗ ಬಿಜೆಪಿ ಕೂಡ ಸಾಗಿದೆ. ಪ್ರಾದೇಶಿಕ ಪಕ್ಷಗಳಲ್ಲಿ ಸನ್‌ ಸ್ಟ್ರೋಕ್‌ ಆದರೆ ಏನೂ ನಷ್ಟವಿಲ್ಲ. ಆದರೆ ಬಿಜೆಪಿಯಂಥ ರಾಷ್ಟ್ರೀಯ ಪಕ್ಷದಲ್ಲಿ ಈ ಬೆಳವಣಿಗೆ ಸರಿಯಲ್ಲ. ವಿಜಯೇಂದ್ರ ಅವರಿಂದ ಬಿಜೆಪಿ ‘ಸನ್‌ ಸ್ಟ್ರೋಕ್‌’ಗೆ ಒಳಗಾಗಿದೆ. ಕುಟುಂಬ ರಾಜಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಲಿಯಾಗುತ್ತಿದ್ದಾರೆ.

ನಾನೊಬ್ಬ ಲೇಖಕ. ಬರವಣಿಗೆ ‌ಮೂಲಕ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ.ಬಿ.ಎಸ್. ಯಡಿಯೂರಪ್ಪ ನನಗಿಂತ ದೊಡ್ಡವರು. ಅವರಿಗೆ ಅಧಿಕಾರದ ಆಸೆ ಇರಬೇಕಾದರೆ ನನಗೆ ಇರಬಾರದಾ? ಎಂದು ಪ್ರಶ್ನಿಸಿದರು.

ನಾನು ಮಂತ್ರಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಆದರೆ, ಜೈಲಿಗೆ ಹೋಗಬೇಕಾದ ಯೋಗೇಶ್ವರ ಸಚಿವರಾಗಿದ್ದಾರೆ. ಕೆಲ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ‌ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಬರುವಾಗ ಮುಂಬೈನಲ್ಲಿ ಕೆಲ ದಿನಗಳ ಕಾಲ ಕಳೆದ ದಿನಗಳ ಬಗ್ಗೆ ಬಾಂಬೆ ದಿನಗಳು ಪುಸ್ತಕ ಬರೆಯುತ್ತೇನೆ. ಯಡಿಯೂರಪ್ಪ ಎನು ಮಾತು ಕೊಟ್ಟಿದ್ದರು ಎನ್ನುವ ಪ್ರಶ್ನೆಗೆ ಉತ್ತರಿಸಲು ನಕಾರ. ಎಲ್ಲವನ್ನೂ ಪುಸ್ತಕದಲ್ಲಿ ಬಹಿರಂಗ ಪಡಿಸುತ್ತೇನೆ ಎಂದರು.

ಸಿಪಿ ಯೋಗೇಶ್ವರ್ ಯಾರು? ಅವರನ್ನ ಸಚಿವರನ್ನಾಗಿ ಮಾಡುವ ಅನಿವಾರ್ಯತೆ ಏನಿತ್ತು? ಮುನಿರತ್ನಗೆ ಸಚಿವ ಸ್ಥಾನ ನೀಡುವುದು ಬಿಟ್ಟು ಯೋಗೇಶ್ವರ್ ಅವರಿಗೆ ಯಾಕೆ ಕೊಡಬೇಕಿತ್ತು? ನಾನು ಅಧಿಕಾರಕ್ಕೆ ಹಂಬಲಿಸಿದವನಲ್ಲ. ಸಾರಾ ಮಹೇಶ್ ಕೊಚ್ಚೆ ಗುಂಡಿ, ಕೊಚ್ಚೆ ಗುಂಡಿಗೆ ಕಲ್ಲು ಎಸೆದು ಹೊಲಸು ಮಾಡಿಕೊಳ್ಳಲು ನನಗಿಷ್ಟವಿಲ್ಲ ಎಂದಿದ್ದಾರೆ.

ನಾನು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿಲ್ಲ. ಮಾತಿನ ಮೇಲೆ, ನಡುವಳಿಕೆ ಮೇಲೆ ಯಾವುದೇ ಪಕ್ಷ ಉಳಿದಿಲ್ಲ. ಯಾವುದೇ ನಾಯಕರು ಮಾತು ಉಳಿಸಿಕೊಳ್ಳುತ್ತಿಲ್ಲ. ಯಡಿಯೂರಪ್ಪನವರು ನನಗೆ ಯಾಕೆ ಸಚಿವ ಸ್ಥಾನ ಕೊಟ್ಟಿಲ್ಲಾ ಎಂಬುದು ಅವರೇ ಹೇಳಬೇಕು. ನಮಗೆ ಮಾತು ಕೊಟ್ಟಿದ್ದರು. ಅದು ಎನು ಎಂಬುದು ಅವರೇ ಬಹಿರಂಗಪಡಿಸಲಿ.

RELATED TOPICS:
English summary :H.Vishwanath

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...