Tue,May14,2024
ಕನ್ನಡ / English

ಕೊಲೆ ಮಾಡಿ ಕಲ್ಲು, ಹಗ್ಗದಿಂದ ಕಟ್ಟಿ ಬಾವಿಗೆ ಎಸೆದ ಹಂತಕರು! | Janata news

19 Jan 2021
2002

ಹಾಸನ : ಹೊಳೆನರಸೀಪುರ ತಾಲ್ಲೂಕಿನ ಮಾರಗೌಡನಹಳ್ಳಿ ಗ್ರಾಮದ ಬಾವಿಯಲ್ಲಿ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಅದೇ ಗ್ರಾಮದ ಎಂ.ಎನ್. ಮೂರ್ತಿ (50) ಅವರ ಶವ ಎಂದು ಗುರುತಿಸಲಾಗಿದೆ.

ಮಾರಗೊಂಡನಹಳ್ಳಿ ಗ್ರಾಮದ ನಿಂಗಪ್ಪ ಎಂಬುವರ ಪುತ್ರ ಎಂ.ಎನ್. ಮೂರ್ತಿ(50) ಕೊಲೆಯಾದ ದುರ್ದೈವಿ. ಬೆಂಗಳೂರಿನ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮೂರ್ತಿ, ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಊರಿಗೆ ಬಂದಿದ್ದರು.

ಭಾನುವಾರ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರಹೋದ ಮೂರ್ತಿ ವಾಪಸ್​ ಬಂದಿರಲಿಲ್ಲ. ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಗ್ರಾಮದ ಕೆರೆಯಲ್ಲಿರುವ ಬಾವಿಯಲ್ಲಿ ಮನುಷ್ಯನ ಕಾಲು ಕಾಣಿಸುತ್ತಿತ್ತು, ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿದರು. ಆಗ ಮೂರ್ತಿ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಕುತ್ತಿಗೆ, ಕಾಲು ಮತ್ತು ಸೊಂಟಕ್ಕೆ ಹಗ್ಗ ಬಿಗಿದು, ಕಲ್ಲು ಕಟ್ಟಿ ಬಾವಿಯಲ್ಲಿ ಹಾಕಿದ್ದಾರೆ. ಇದು ಕೊಲೆ ಎಂದು ಮೃತರ ಸಹೋದರ ಎಂ.ಎನ್. ನೀಲಕಂಠ ದೂರು ದಾಖಲಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಎ. ರಾಘವೇಂದ್ರ ಅವರೊಂದಿಗೆ ಮೂರ್ತಿಯ ಸಹೋದರ ಗುರುತಿಸಿಕೊಂಡು ಪ್ರಚಾರ ಮಾಡಿದ್ದರು. ಗೆದ್ದ ನಂತರ ರಾಘವೇಂದ್ರ ಪಟಾಕಿ ಹೊಡೆಯುವ ಸಂದರ್ಭದಲ್ಲಿ ಜೆಡಿಎಸ್ ಬೆಂಬಲಿಗರ ನಡುವೆ ಗಲಾಟೆ ನಡೆದು, ಎರಡೂ ಪಕ್ಷದವರೂ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ.

RELATED TOPICS:
English summary :Hasan

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...