Sun,May12,2024
ಕನ್ನಡ / English

ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು | Janata news

27 Jan 2021
1867

ಬೆಂಗಳೂರು : ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದಿದ್ದಾರೆ.

ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು ಎಂದು ತಿಳಿಸಿದ್ದಾರೆ.

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದು ಹೇಳಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ ಎಂದಿದ್ದಾರೆ.

RELATED TOPICS:
English summary :HD Kumaraswamy

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...