ಮೈಸೂರಿನಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರಿಗೆ ಗಾಯ | Janata news

ಮೈಸೂರು : ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ, ಮನೆಯ ಫ್ರಿಡ್ಜ್ ಗೂ ತಗುಲಿದ ಪರಿಣಾಮ, ಫ್ರಿಡ್ಜ್ ಸ್ಪೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ಮೈಸೂರಿನ ಲಾಲ್ ಬಂದ್ ಬೀದಿಯೊಂದರ ಮನೆಯಲ್ಲಿ ನಡೆದಿದೆ.
ಮೈಸೂರಿನ ಲಾಲ್ ಬಂದ್ ಬೀದಿಯಲ್ಲಿ ವಾಸಿಸುತ್ತಿರುವ ಆಟೋ ಚಾಲಕ ಚಂದ್ರು ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಗಮನಿಸಿದಂತ ನೆರೆಹೊರೆಯವರು ಸೇರಿದಂತೆ ಎಲ್ಲರೂ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು.
ಬೆಂಕಿ ಫ್ರಿಡ್ಜ್ ಗೂ ಹೊತ್ತಿಕೊಂಡಿದ್ದರಿಂದ ಅದರಲ್ಲಿದ್ದಂತ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ನಂದಿಸಲು ಬಂದಿದ್ದಂತ ಪಕ್ಕದ ಮನೆಯ ಮೊಹಮ್ಮದ್ ಉರ್ ಸೇರಿದಂತೆ ಮೂವರು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂವರು ತೀವ್ರ ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ಭಾರಿ ಅನಾಹುತ ತಪ್ಪಿಸಿದ್ದಾರೆ.
