Thu,May16,2024
ಕನ್ನಡ / English

ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ | Janata news

15 Feb 2021
2081

ಶಿವಮೊಗ್ಗ : ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಹೆಚ್​ಡಿಕೆ, ಕಳೆದ ಒಂದು ವರ್ಷದಿಂದ ಕೊರೊನಾ ಇದ್ದರಿಂದ ನಾನು ಯಾವ ವಿಷಯಗಳನ್ನೂ ಮಾತನಾಡಿಲ್ಲ. ರೈತರ ಬೆಳೆಗಳು ನಾಶವಾಗಿವೆ. ಭಗವಂತನ ದಯೆಯಿಂದ ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದೆ. ಜುಲೈನಲ್ಲಿ ಅಧಿಕಾರದಿಂದ ನಿರ್ಗಮಿಸಿದೆ, ಅಲ್ಲಿಂದ ಇಲ್ಲಿಯವರೆಗೆ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದರು.

ಕಳೆದೊಂದು ವರ್ಷದಿಂದ ನಾನು ನಿಷ್ಕ್ರಿಯನಾಗಿದ್ದೇನೆ ಅದಕ್ಕೆ ಕಾರಣ ವೈದ್ಯರ ಸಲಹೆ. ನಾನು ಪಕ್ಷದ ಸಂಘಟನೆಗೆ ಚಾಲನೆ ನೀಡಲು ತೀರ್ಮಾನ ಮಾಡಿದ್ದೇನೆ ಎಂದರು.

ಕಬ್ಬು ಬೆಳಗಾರರಿಗೆ ಹಣ ನೀಡದೆ ಸರ್ಕಾರ ಟೋಪಿ ಹಾಕಿದೆ. ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಅಂತ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಜೆಟ್ ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿತ್ತು. ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಮೈತ್ರಿ ಸರ್ಕಾರ ಪತನವಾದ ಬಳಿಕ ಬಂದ ಸರ್ಕಾರ ಎರಡು ವರ್ಷದಲ್ಲಿ ಮಾಡಿರುವ ಘೋಷಣೆಗಳು, ಮತ್ತು ಜನರ ಕಷ್ಟಗಳಿಗೆ ಹೇಗೆ ಪ್ರತಿಕ್ರೀಯೆ ನೀಡಿದ್ದಾರೆ ಎಂಬುದನ್ನು ನಾನು ಕಂಡಿದ್ದೇನೆ ಎಂದರು. ಮುಂದಿನ ದಿನಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ, ಯಾವ ಪಕ್ಷದ ಆಶ್ರಯವಿಲ್ಲದೆ ಅಧಿಕಾರ ಹಿಡಿಯಲು ಸಂಘಟನೆ ಮಾಡಲಾಗುತ್ತದೆ ಎಂದರು.

ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಇದೇ ವೇಳೆ, ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್‌ ಇದ್ದರೆ ಬಿಪಿಎಲ್‌ ಪಡಿತರ ಕಾರ್ಡ್​ ರದ್ದು ಮಾಡಲಾಗುತ್ತದೆ ಎಂದು ಸಚಿವ ಉಮೇಶ್ ಕತ್ತಿ ನೀಡಿರೋ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿದ ಹೆಚ್​​ಡಿಕೆ ಆಹಾರ ಸಚಿವರ ಹೇಳಿಕೆ ಅತ್ಯಂತ ಬಾಲಿಷ ಹಾಗೂ ಜನ ಜನ ವಿರೋಧಿ ತೀರ್ಮಾನ.ಆಹಾರ ಸಚಿವರಿಗೆ ಪರಿಜ್ಞಾನ ಇಲ್ಲ. ಇದು ಅತ್ಯಂತ ಕೆಟ್ಟ ತೀರ್ಮಾನ ಎಂದರು.

RELATED TOPICS:
English summary :HD Kumaraswamy

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...