Tue,May21,2024
ಕನ್ನಡ / English

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಜಾರಕಿಹೊಳಿ: ರಾಜೀನಾಮೆ ಅಂಗೀಕರಿಸಿದ ಯಡಿಯೂರಪ್ಪ | Janata news

03 Mar 2021
1433

ಬೆಂಗಳೂರು : ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಆಗಬಾರದು ಎಂದು ರಾಜೀನಾಮೆ ನೀಡಿರುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು.

ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಜುಗರ ಆಗಬಾರದು. ನನ್ನಿಂದ ಸಿಎಂಗೆ ಇರುಸುಮುರುಸು ಆಗಬಾರದು. ಸದನದಲ್ಲಿ ಆಡಳಿತ ಪಕ್ಷಕ್ಕೆ ಮುಜುಗರವಾಗೋದು ಬೇಡ. ಆದರೆ ಈ ಬಗ್ಗೆ ಸೂಕ್ತ ತನಿಖೆಯಾಗಲೇಬೇಕು. ಷಡ್ಯಂತ್ರ ನಡೆದಿರೋ ಬಗ್ಗೆಯೂ ಸಮರ್ಪಕ ವಿಚಾರಣೆಯಾಗಬೇಕು ಎಂದು ಇದೇ ವೇಳೆ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ರಾಜೀನಾಮೆ ಪತ್ರವನ್ನು ಯಡಿಯೂರಪ್ಪ ಅವರು ಅಂಗೀಕರಿಸಿದ್ದು, ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಪತ್ರ ರವಾನೆಯಾಗಿದೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಹೊರ ಬರುತ್ತೇನೆ. ಆ ಬಳಿಕ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಬುಧವಾರ ಬೆಳಿಗ್ಗೆ ಈ ಸಂಬಂಧ ತುರ್ತು ಸಭೆ ನಡೆಸಿದರು. ಆ ಬಳಿಕ ರಾಜೀನಾಮೆ ನೀಡುವಂತೆ ಸಂದೇಶ ರವಾನೆ ಮಾಡಿದರು. ಈ ಸಂಬಂಧ ಯಡಿಯೂರಪ್ಪ ಅವರು ರಮೇಶ ಅವರ ಸಹೋದರ ಬಾಲಚಂದ್ರ ಅವರನ್ನು ಕರೆಸಿಕೊಂಡು ರಾಜೀನಾಮೆ ನೀಡುವಂತೆ ಸೂಚಿಸಿದರು. ಅದರ ಬೆನ್ನಲ್ಲೇ ರಮೇಶ್‌ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಯಡಿಯೂರಪ್ಪ ಅವರಿಗೆ ಕಳಿಸಿದರು ಎಂದು ಮೂಲಗಳು ತಿಳಿಸಿವೆ.

janata

RELATED TOPICS:
English summary :Ramesh Jarkiholi

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...