Sun,May19,2024
ಕನ್ನಡ / English

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರ ಪತನಕ್ಕೆ ಕ್ಷಣಗಣನೆ : ವಿಶ್ವಾಸ ಮತ ಯಾಚನೆ | Janata news

04 Mar 2021
2456

ಇಸ್ಲಾಮಾಬಾದ್ : ನೆರೆರಾಷ್ಟ್ರ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಅಳಿವು ಉಳಿವಿನ ಕುರಿತು ಮಾಹಿತಿ ಹೊರಬಿಳಲು ಕೌಂಟ್-ಡೌನ್ ಈಗಾಗಲೇ ಶುರುವಾಗಿದೆ.

ನಿನ್ನೆ ಬುಧವಾರ ನಡೆದ ಚುನಾವಣೆಯಲ್ಲಿ ಸರ್ಕಾರದ ಹಣಕಾಸು ಸಚಿವರು ಸೆನೆಟ್ ಸ್ಥಾನ ಕಳೆದುಕೊಂಡ ಬೆನ್ನಲ್ಲೇ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸಂಸತ್ತಿನಲ್ಲಿ ವಿಶ್ವಾಸ ಮತ ಚಲಾಯಿಸಲಿದ್ದಾರೆ, ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಸದಾ ಭಾರತದ ರಾಜಕೀಯ ಬೆಳವಣಿಗೆ ಕುರಿತು ಆಸಕ್ತಿ ವಹಿಸಿದ್ದ ಇಮ್ರಾನ್ ಖಾನ್ ಕುರ್ಚಿ ಅಲುಗಾಡುತ್ತಿದ್ದು, ಸಧ್ಯಕ್ಕೆ ಪಾಕಿಸ್ತಾನದಲ್ಲಿ ರಾಜಕೀಯ ಬೆಳವಣಿಗೆ ಗರಿಗೆದರಿದೆ. ವಿಪಕ್ಷ ಬೆಂಬಲಿತ ಮಾಜಿ ಪ್ರಧಾನಿ ಯೂಸುಫ್ ರಝಾ ಗಿಲಾನಿ ವಿರುದ್ಧ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಸೆನೆಟ್ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ನಂತರ, ಇಮ್ರಾನ್ ಖಾನ್ ಸರ್ಕಾರಕ್ಕೆ ದೇಶದ ಸೆನೆಟ್ ನಲ್ಲಿ ಅಚ್ಚರಿಯ ಬಹುಮತದ ನಷ್ಟವನ್ನು ಎದುರಿಸಬೇಕಾಯಿತು.

ಸೆನೆಟ್ ಸ್ಥಾನಕ್ಕಾಗಿ, ರಾಷ್ಟ್ರೀಯ ಅಸೆಂಬ್ಲಿಗೆ ನೇರವಾಗಿ ಚುನಾಯಿತ ಸದಸ್ಯರು ಮತ ಚಲಾಯಿಸುತ್ತಾರೆ. ಮತ್ತು ಶೇಖ್ ಅವರ ಸೋಲಿನ ಹೊರತಾಗಿಯೂ, ತಾವು ಇನ್ನೂ ಬಹುಮತವನ್ನು ಹೊಂದಿದ್ದಾರೆಂದು ತೋರಿಸಲು ಖಾನ್ ವಿಶ್ವಾಸ ಮತ ಚಲಾಯಿಸುತ್ತಿದ್ದಾರೆ, ಎಂದು ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇಂದಿನ ಮಹತ್ವದ ಬೆಳವಣಿಗೆಯೊಂದರಲ್ಲಿ, ಇಮ್ರಾನ್ ಖಾನ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಮತ್ತು ಐಎಸ್ಐ ಮುಖ್ಯಸ್ಥರೊಂದಿಗಿನ ಸಭೆಯನ್ನು ನಡೆಸಿ ಕೆಲವೇ ಗಂಟೆಗಳ ಮೊದಲು ಮುಕ್ತಾಯಗೊಳಿಸಿದ್ದಾರೆ. ಮೂಲಗಳ ಪ್ರಕಾರ, ಸಂಸತ್ತಿನಲ್ಲಿ ವಿಶ್ವಾಸ ಮತ ಚಲಾಯಿಸುವ ಘೋಷಣೆ ಬೆನ್ನಲ್ಲೇ, ಪ್ರಧಾನಿ ಸ್ಥಾನದ ಉಳುವಿಗಾಗಿ ಖಾನ್ ನಡೆಸಿದ ಕಸರತ್ತು ಎಂದು ಈ ಸಭೆಯನ್ನು ವಿಶ್ಲೇಷಿಸಲಾಗಿದೆ.

ಪಾಕಿಸ್ತಾನದ ಸ್ಥಳೀಯ ಸಮಯ ಸಂಜೆ 7:30 ಸುಮಾರು ಇಮ್ರಾನ್ ಖಾನ್ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಎನ್ನಲಾಗಿದ್ದು, ಬಹುಶಃ ಶನಿವಾರ ಸಂಸತ್ತಿನಲ್ಲಿ ವಿಶ್ವಾಸ ಮತ ಯಾಚಿಸುವ ಸಾದ್ಯತೆಗಳಿವೆ.

English summary :Count down for Pak PM Imran Khan govt exit : To seek vote of confidence

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ