Thu,May16,2024
ಕನ್ನಡ / English

ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ: ಸಾ.ರಾ.ಮಹೇಶ್ | Janata news

06 Mar 2021
1148

ಮೈಸೂರು : ಮಾನಹಾನಿ ಸುದ್ದಿ ಪ್ರಸಾರವಾಗದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ಸಚಿವರುಗಳನ್ನು ಸಂಪುಟದಿಂದ ವಜಾ ಮಾಡಿ ಎಂದು ಶಾಸಕ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಮೊರೆ ಹೋಗಿರುವವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಸದನದಲ್ಲೂ ಒತ್ತಾಯ ಮಾಡುತ್ತೇನೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ, ಸಚಿವರು ಅರ್ಜಿ ಹಾಕಿರುವುದೇ ನಾವೆಲ್ಲರೂ ತಲೆ ತಗ್ಗಿಸುವ ವಿಚಾರ ಎಂದರು.

ಬಾಂಬೆಯಲ್ಲಿ ಅಷ್ಟು ಬಿಗಿ ಭದ್ರತೆ ಇಟ್ಟುಕೊಂಡಿದ್ದವರು ಈಗ ಏಕೆ ಅರ್ಜಿ ಹಾಕಿದ್ದಾರೆ. ಈ ಶಾಸಕರುಗಳನ್ನಿಟ್ಟುಕೊಂಡು ಬ್ಲಾಕ್‍ಮೇಲ್ ಮಾಡುವ ಷಡ್ಯಂತ್ರ ಮೊದಲೇ ನಿರ್ಧಾರವಾಗಿತ್ತಾ? ಸಚಿವರುಗಳನ್ನೇ ಬ್ಲಾಕ್‍ಮೇಲ್ ಮಾಡುತ್ತಾರೆ ಎಂದಾದರೆ ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು.

ಇವರ ಈ ನಡವಳಿಕೆ ನೋಡಿದರೆ ಇವರನ್ನು ಬ್ಲಾಕ್ ಮೇಲ್ ಮಾಡುವ ಷಡ್ಯಂತ್ರ ಮೊದಲೇ ಆಗಿತ್ತಾ ಎಂಬ ಅನುಮಾನ ಬರುತ್ತಿದೆ. ಸಚಿವರನ್ನೇ ಬ್ಲಾಕ್ ಮೇಲ್ ಮಾಡುವುದಾದರೆ ಜನಸಾಮಾನ್ಯರ ಗತಿ ಏನು? ಮುಖ್ಯಮಂತ್ರಿ ಇದನ್ನು ಗಂಭಿರವಾಗಿ ಪರಿಗಣಿಸಬೇಕು ಎಂದು ಸಾ.ರಾ.ಮಹೇಶ್ ಆಗ್ರಹಿಸಿದರು.

ವಿಡಿಯೋ ಪ್ರಸಾರಕ್ಕೆ ತಡೆಕೋರಿ ಅರ್ಜಿ ಹಾಕಿರುವುದು ಶಾಸಕಾಂಗಕ್ಕೆ ಮಾಡಿದ ಅಪಮಾನ‌. ನಿಮಗೆ ಯಾಕೆ ಅನುಮಾನ. ಮೊನ್ನೆಯು ಅನೇಕ ಶಾಸಕರ ವಿಡಿಯೋ ಇದೆ ಅಂತ ಹೇಳಿದ್ದರು. ಆ ಹೇಳಿಕೆ ನೀಡಿದವರನ್ನ ತಕ್ಷಣ ಯಾಕೆ ಅರೆಸ್ಟ್ ಮಾಡಲಿಲ್ಲ. ಅದೇನು ಬ್ಲಾಕ್ ಮೇಲ್ ತಂತ್ರನಾ. ತಪ್ಪು ಮಾಡದೆ ಇದ್ರೆ ನೀವ್ಯಾಕೆ ನ್ಯಾಯಾಲಯಕ್ಕೆ ಹೋದ್ರಿ? ಇದನ್ನ ಮಾತನಾಡಲಿಕ್ಕೆ ಅಸಹ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇವರ ವಿಡೀಯೊ ಪ್ರಸಾರಕ್ಕೆ ತಡೆ ಕೋರಿ ಅರ್ಜಿ ಹಾಕಿರುವುದು ಶಾಸಕಾಂಗಕ್ಕೆ ಮಾಡಿದ ಅವಮಾನ. ನಿಮಗೆ ಯಾಕೇ ಭಯ. ಮೊನ್ನೆಯೂ ಅನೇಕ ಶಾಸಕರ ವೀಡಿಯೊ ಇದೆ ಅಂತ ಹೇಳಿದ್ದರು. ಆ ಹೇಳಿಕೆ ನೀಡಿದವರನ್ನು ತಕ್ಷಣ ಯಾಕೆ ಬಂಧಿಸಲಿಲ್ಲ? ಅದೇನು ಬ್ಲಾಕ್ ಮೇಲ್ ತಂತ್ರನಾ ಎಂದವರು ಪ್ರಶ್ನಿಸಿದರು.

ತಪ್ಪು ಮಾಡಿಲ್ಲ ಎಂದರೆ ನೀವೇಕೆ ನ್ಯಾಯಾಲಯಕ್ಕೆ ಹೋಗಿದ್ದೀರಿ. ಬಾಂಬೆಗೆ ಹೋಗಿದ್ದವರ ಬಗ್ಗೆ ಇನ್ನು ಏನೇನು ಇದೆಯೊ. ಈ ರೀತಿಯ ಸರ್ಕಾರ ತರುವುದಕ್ಕೆ ಬಾಂಬೆಗೆ ಹೋಗಿದ್ದು ಇದೇನಾ ನಿಮ್ಮ ಘನ ಸಾಧನೆ ಎಂದು ಕಿಡಿಕಾರಿದರು.

RELATED TOPICS:
English summary :Sa Ra Mahesh

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...