Sun,May19,2024
ಕನ್ನಡ / English

ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೋಟಿಸ್​ ಜಾರಿ | Janata news

14 Mar 2021
1904

ಬೆಂಗಳೂರು : ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದ ಯುವತಿಗೆ ಕಬ್ಬನ್​ ಪಾರ್ಕ್​ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.

ಶೀಘ್ರದಲ್ಲೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಯುವತಿಗೆ ಸೂಚಿಸಲಾಗಿದೆ. ಆಕೆಯ ಮನೆ, ಪಿಜಿ ಹಾಗೂ ಸ್ನೇಹಿತರಿಗೆ ಪೊಲೀಸರು ನೋಟಿಸ್ ತಲುಪಿಸಿದ್ದಾರೆ.

ಬಸವನ ಬಾಗೇವಾಡಿಯ ಆಕೆಯ ಮನೆಗೆ, ಸಂಬಂಧಿಕರಿಗೆ ಮತ್ತು ಸ್ನೇಹಿತರಿಗೆ ಪೊಲೀಸರು ನೋಟಿಸ್ ತಲುಪಿಸಿದ್ದಾರೆ. ಯುವತಿಗೆ ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ನಿನ್ನೆ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಕೆಲವೇ ಕ್ಷಣಗಳಲ್ಲಿ, ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಎನಿಸಿಕೊಂಡಿರುವ ಯುವತಿ ನಿನ್ನೆ ದಿಢೀರ್ ಪ್ರತ್ಯಕ್ಷವಾಗಿದ್ದು, ರಕ್ಷಣೆ ಕೋರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಕರಣದಿಂದ ತನಗೂ ಹಾಗೂ ತನ್ನ ಕುಟುಂಬಕ್ಕೂ ಆಗಿರುವ ತೊಂದರೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 34 ಸೆಕೆಂಡ್​ಗಳ ಹೇಳಿಕೆಯ ವಿಡಿಯೋ ಇದಾಗಿದ್ದು, ಪ್ರಕರಣದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.

ಅಜ್ಞಾತ ಸ್ಥಳದಿಂದ 34 ಸೆಕೆಂಡ್​ನ ವಿಡಿಯೋ ಮಾಡಿ ಹರಿ ಬಿಟ್ಟಿರುವ ಯುವತಿ, ರಮೇಶ್ ಜಾರಕಿಹೊಳಿ ಅವರು ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ನನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದ ನನ್ನ ಮಾನ ಮರ್ಯಾದೆ ಊರು ತುಂಬಾ ಹರಾಜಾಗಿದೆ. ನನ್ನ ಮನೆ ಹತ್ತಿರ ಬಂದು ಯಾರೋರೊ ಏನೇನೋ ಹೇಳಿದ್ದಾರೆ. ನನ್ನ ತಂದೆ ತಾಯಿ ಹಾಗೂ ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇವೆ. ಆ ಅಶ್ಲೀಲ ವಿಡಿಯೋ ಹೇಗೆ ಮಾಡಿದಾರೋ ನನಗೆ ಗೊತ್ತಿಲ್ಲ. ದಯವಿಟ್ಟು ನನಗೆ ರಕ್ಷಣೆ ನೀಡಬೇಕು ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಳು.

ಇನ್ನು ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಯುವತಿಯ ಕುಟುಂಬಕ್ಕೆ ಜೀವ ಭಯವಿರುವುದು ಗಮನಕ್ಕೆ ಬಂದಿದೆ. ಆಕೆಗೆ ಸೂಕ್ತ ಭದ್ರತೆ ಒದಗಿಸಲು ಎಸ್‌ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಅಂತಾ ಹೇಳಿದ್ದಾರೆ.

RELATED TOPICS:
English summary :Ramesh Jarkiholi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...