Sun,May19,2024
ಕನ್ನಡ / English

ಮಾಸ್ಕ್​ ಧರಿಸದ ದಂಪತಿಗೆ ದಂಡ, ನಾನು ದಲಿತ ನಾಯಕ, ದಂಡ ಹಾಕ್ತೀರಾ? ಡಿಸಿಗೆ ವ್ಯಕ್ತಿ ಅವಾಜ್, ವಿಡಿಯೋ ವೈರಲ್ | Janata news

19 Mar 2021
1563

ಹುಬ್ಬಳ್ಳಿ: : ಮಾಸ್ಕ್ ಧರಿಸದವರಿಗೆ ದಂಡ ಹಾಕಲು ಮುಂದಾಗಿದ್ದ ಜಿಲ್ಲಾಧಿಕಾರಿಯೇ ಅವಾಜ್ ಹಾಕಿರುವ ಘಟನೆ ನಗರದ ಮಾಲ್​ವೊಂದರಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಅರ್ಬನ್ ಓಯಾಸಿಸ್ ಮಾಲ್‍ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳನ್ನು ಕಂಡು ಮಾಸ್ಕ್ ಧರಿಸದ ಜನರು ಅಲ್ಲಿಂದ ಪರಾರಿಯಾಗಲು ಯತ್ನಿಸಿದರು. ಈ ವೇಳೆ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ದಂಡ ವಿಧಿಸಲು ಮುಂದಾದ ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಇಳಿದು ಜಗಳ ಮಾಡಿದ ಘಟನೆ ನಡೆದಿದೆ.

ಮಾಸ್ಕ್​ ಧರಿಸದ ಮಹಿಳೆಯನ್ನು ಡಿಸಿ ಹಾಗೂ ತಹಶೀಲ್ದಾರರು ತಡೆದಿದ್ದಕ್ಕಾಗಿ ದಂಡ ಕಟ್ಟೋದಿಲ್ಲ. ನಾನು ಯಾರು ಗೊತ್ತಾ? ಎಂದು ಮಹಿಳೆ ಪತಿ ಜಗಳವಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

janata

ನಾನು ದಂಡ ಕಟ್ಟೋದಿಲ್ಲ.. ನಾನು ಯಾರು ಗೊತ್ತಾ..? ಎಂದು ಡಿಸಿ ಎದುರಿಗೆ ಅಧಿಕಾರಿಗಳೊಂದಿಗೆ ಜಟಾಪಟಿ ನಡೆಸಿದರು. ದಂಡ ಕಟ್ಟವುದಿಲ್ಲ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆ ಎಂದು ವ್ಯಕ್ತಿ ಪಟ್ಟು‌ ಹಿಡಿದಿದ್ದು, ಮಹಿಳೆಯರನ್ನು ಹೀಗೆ ತಡೆಯುತ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಕೊನೆಗೆ ಅಧಿಕಾರಿಗಳು ಮಾಸ್ಕ್​ ಧರಿಸದ ದಂಪತಿಗೆ 250 ರೂಪಾಯಿ ದಂಡ ಹಾಕಿದರು. ಹಣ ಕಟ್ಟಲು ನನ್ನ ಬಳಿ ಹಣ ಇಲ್ಲ‌. ಡಿಸಿ ಇದ್ದರೆ ನಾ ಏನ್ ಮಾಡಲಿ ? ನಾ ದಂಡ ಕಟ್ಟುವುದಿಲ್ಲ. ನನ್ ಹೆಂಡತಿಗೆ ಹ್ಯಾಂಗ್ ನಿಲ್ಲಿಸಿದ್ರಿ.? ಮಾಸ್ಕ್ ಬಿಟ್ಟು ಬಂದೀವಿ.. ಎಂದು ವ್ಯಕ್ತಿ ತಕರಾರು ಮಾಡಿದ್ದಾರೆ.

ಆಗ ನನ್ನ ಬಳಿ 150 ರೂಪಾಯಿ ಮಾತ್ರ ಇದೆ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಅಧಿಕಾರಿಗಳು 250 ರೂಪಾಯಿ ದಂಡ ಕಟ್ಟಿಸಿಕೊಂಡು ಸ್ಥಳದಲ್ಲೇ ಬಿಸಿ ಮುಟ್ಟಿಸಿದ್ದಾರೆ.

janata

RELATED TOPICS:
English summary :Hubli

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...