Wed,May15,2024
ಕನ್ನಡ / English

ರೈತರ ಮೇಲೆ ಚಿರತೆ ದಾಳಿ: ಚಿರತೆಯೊಂದಿಗೆ ಧೈರ್ಯದಿಂದ ಹೋರಾಡಿದ ಇಬ್ಬರು ರೈತರು! | Janata news

24 Mar 2021
1879

ಹಾವೇರಿ : ಕಳೆದ ರಾತ್ರಿ ಜಮೀನಿನಲ್ಲಿ ನೀರು ಹಾಯಿಸಲು ಹೋದ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಹಾಡೆ ಗ್ರಾಮದಲ್ಲಿ ನಡೆದಿದೆ.

ಈ ಕಾದಾಟದಲ್ಲಿ ಚಿರತೆ ಸಾವನ್ನಪ್ಪಿದೆ. ಇಬ್ಬರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದರೆ, ಮತ್ತೊಬ್ಬನ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. .

ಗ್ರಾಮದ ರೈತ 46 ವರ್ಷದ ಗದಿಗೆಪ್ಪ ಯಳವಳ್ಳಿ ಮತ್ತು 45 ವರ್ಷದ ಕೃಷ್ಣಪ್ಪ ಮೂಡಬಾಗಿಲ ಎಂಬ ರೈತರು ರಾತ್ರಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ಕೆಲಸ ಮುಗಿಸಿ ಹಿಂದಿರುಗುವ ವೇಳೆ ಚಿರತೆ ದಾಳಿ ಮಾಡಿದೆ.

ಗದಿಗೆಪ್ಪ ಚಿರತೆ ಜೊತೆ ಸೆಣಸಾಟ ನಡೆಸಿದ್ದಾನೆ. ನಂತರ ಗದಿಗೆಪ್ಪನ ಕೂಗಾಟ ಕೇಳಿ, ಚಿರತೆ ಕಂಡು ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಪ್ರಾಣ ರಕ್ಷಣೆಗೆ ಚಿರತೆ ಮೇಲೆ‌ ಕಲ್ಲು ಎತ್ತಿ ಹಾಕಿದ್ದಾರೆ. ಆಗ ಚಿರತೆ ನೆಲಕ್ಕೆ ಬಿದ್ದಿದೆ.

ಗದಿಗೆಪ್ಪನ ತಲೆಗೆ ಚಿರತೆ ದಾಳಿಯಿಂದ ಬಲವಾದ ಪೆಟ್ಟು ಬಿದ್ದಿದೆ, ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಆರ್‌ಎಫ್‌ಒ ಹೇಮಗಿರಿ ಅಂಗಡಿ, ಸಿಪಿಐ ಮಂಜುನಾಥ ಪಂಡಿತ, ಪಿಎಸ್‌ಐ ಕೃಷ್ಣಪ್ಪ ತೋಪಿನ ಭೇಟಿ ನೀಡಿ ಪರಿಶೀಲಿಸಿದರು.

ಗಾಯಾಳುಗಳ ಸಂಬಂಧಿಕರು ಹಾಗೂ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಹತ್ಯೆಯಾಗಿರುವ ಚಿರತೆ ಮಾತ್ರವಲ್ಲದೆ, ಗ್ರಾಮದ ಬಳಿ ಸಾಕಷ್ಟು ಚಿರತೆಗಳಿವೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

RELATED TOPICS:
English summary :Haveri: Leopard Attack

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...