Sun,May19,2024
ಕನ್ನಡ / English

ಹೈಕೋರ್ಟ್ ಸಂಪರ್ಕಿಸುವ ಸ್ವಾತಂತ್ಯ್ರದೊಂದಿಗೆ ಪರಂಬೀರ್ ಸಿಂಗ್ ಅರ್ಜಿ ವಜಾ ಮಾಡಿದ ಸುಪ್ರಿಂ | Janata news

24 Mar 2021
2132

ನವದೆಹಲಿ : 100ಕೋಟಿ ಹಪ್ತಾ ವಸೂಲಿ ಸೇರಿದಂತೆ, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಸೋಮವಾರ ಸಲ್ಲಿಸಿದ್ದ ಅರ್ಜಿಯಲ್ಲಿ ಮುಂಬೈ ಪೋಲಿಸ್ ಆಯುಕ್ತ ಹುದ್ದೆಯಿಂದ ಗೃಹರಕ್ಷಕ ದಳಕ್ಕೆ ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿದ್ದರು.

ವರದಿಗಳ ಪ್ರಕಾರ, ಈ ವಿಚಾರಣೆಯನ್ನು ಕೈಗೆತ್ತಿಕೊಂಡ 2 ನ್ಯಾಯಾಧೀಶರ ನ್ಯಾಯಪೀಠವು ಆರೋಪಗಳು ಮತ್ತು ಪ್ರತಿ-ಆರೋಪಗಳು ಸ್ವರೂಪದಲ್ಲಿ ಗಂಭೀರವಾಗಿದೆ ಎಂದು ಗಮನಿಸಿರುವುದಾಗಿ ಹೇಳಿದ್ದು, ವಿಷಯವು ಗಂಭೀರವಾಗಿದೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಆರ್ಟಿಕಲ್226 ರ ಶಕ್ತಿ ವಿಸ್ತಾರವಾಗಿದೆ. ಹೈಕೋರ್ಟ್ ಇದನ್ನು ನಿಭಾಯಿಸಬಹುದು, ಎಂದು ನ್ಯಾಯಪೀಠ ಹೇಳಿದೆ. ಅವರ ಮನವಿಯನ್ನು ವಜಾಗೊಳಿಸುವಾಗ, ಸುಪ್ರೀಂ ಕೋರ್ಟ್ ಪರಂಬೀರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸುವ ಸ್ವಾತಂತ್ರ್ಯವನ್ನು ನೀಡಿದೆ.

ಮಾರ್ಚ್ 20ರಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದ ನಂತರ ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಾಕಷ್ಟು ಕೋಲಾಹಲ ಸೃಷ್ಟಿಸಿದ್ದರು. ಅವರು ತಮ್ಮ ಪತ್ರದಲ್ಲಿ, ಮುಂಬೈ ಪೊಲೀಸರ ಅಪರಾಧ ವಿಭಾಗದ ಅಪರಾಧ ಗುಪ್ತಚರ ಘಟಕದ ಮುಖ್ಯಸ್ಥರಾಗಿದ್ದ ಸಚಿನ್ ವಾಜೆ ಅವರನ್ನು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಅವರು ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಬಾರಿ ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದರು ಮತ್ತು ಪ್ರತಿ ತಿಂಗಳು 100ಕೋಟಿ ಹಣ ಸಂಗ್ರಹಿಸಲು ಮಾಡಲು ಪದೇ ಪದೇ ಸೂಚನೆ ನೀಡಲಾಗಿದೆ, ಎಂದು ಬಹಿರಂಗ ಪಡಿಸಿದ್ದರು.

ಅನಿಲ್ ದೇಶ್ಮುಖ್ ಈ ಆರೋಪಗಳನ್ನು ಕೂಡಲೇ ನಿರಾಕರಿಸಿದ್ದರು ಮತ್ತು ಪರಂಬೀರ್ ಸಿಂಗ್ ಅವರು ತಮ್ಮದೇ ಆದ ತಪ್ಪಿನಿಂದಾದ ಕಾನೂನು ಪರಿಣಾಮಗಳನ್ನು ತಪ್ಪಿಸಲು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ, ಎಂದು ಹೇಳಿದ್ದಾರೆ.

RELATED TOPICS:
English summary :Supreme court rejected ParmBir Singh plea allowing his to approach high court

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...