Fri,May17,2024
ಕನ್ನಡ / English

ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯನ್ನು ತೆಗೆದು ಹಾಕುವ ಟಾಟಾ ಗ್ರೂಪ್‌ನ ನಿರ್ಣಯ ಸರಿಯಾಗಿದೆ - ಸುಪ್ರಿಂಕೋರ್ಟ್ | Janata news

26 Mar 2021
1232

ನವದೆಹಲಿ : ದೇಶದ ಅತಿದೊಡ್ಡ ಕಂಪನಿಗಳಲ್ಲಿ ಒಂದಾದ ಟಾಟಾ ಸನ್ಸ್‌ ಸಮೂಹಕ್ಕೆ ಇಂದು ದೊರೆತ ಅತಿ ದೊಡ್ಡ ಗೆಲುವೊಂದರಲ್ಲಿ, 2016ರಲ್ಲಿ ಟಾಟಾ ಗ್ರೂಪ್‌ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಮತ್ತು ಮಿಸ್ತ್ರಿ ಅವರನ್ನು ಪುನಃ ನೇಮಿಸುವ ಕಂಪನಿ ಕಾನೂನು ನ್ಯಾಯಮಂಡಳಿಯ ಆದೇಶವನ್ನು ತಳ್ಳಿಹಾಕಿದೆ.

ಅಡಿಗೆ ಉಪ್ಪಿನಿಂದ ಹಿಡಿದು ಕಾರು/ಸಾಫ್ಟ್‌ವೇರ್ ಸೇರಿದಂತೆ 100 ಶತಕೋಟಿಗಿಂತಲೂ ಹೆಚ್ಚು ವಹಿವಾಟು ನಡೆಸುವ ಟಾಟಾ ಗ್ರೂಪ್‌ನ ಅಧ್ಯಕ್ಷರನ್ನಾಗಿದ್ದ ಸೈರಸ್ ಮಿಸ್ತ್ರಿ ಅವರನ್ನು 2016ರಲ್ಲಿ ತೆಗೆದು ಹಾಕಲಾಗಿತ್ತು.

ನ್ಯಾಷನಲ್ ಕಂಪನಿ ಲಾ ಮೇಲ್ಮನವಿ ನ್ಯಾಯಮಂಡಳಿ(ಎನ್‌ಸಿಎಲ್‌ಎಟಿ) 2019ರ ಡಿಸೆಂಬರ್ 18 ರಂದು ಶ್ರೀ ಮಿಸ್ತ್ರಿ ಅವರನ್ನು ಸಂಘಟನೆಯ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಪುನಃ ನೇಮಿಸಿತ್ತು. ಸುಪ್ರಿಂಕೋರ್ಟ್ ನಲ್ಲಿ ಟಾಟಾ ಸನ್ಸ್‌ ಸವಾಲು ಮಾಡಿದ ಆ ಆದೇಶವನ್ನು ಈಗ ರದ್ದುಪಡಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿಯಾಗಿದೆ ಎಂದು ಹೇಳಿದರು. ಕಾನೂನಿನ ಎಲ್ಲಾ ಪ್ರಶ್ನೆಗಳು ಟಾಟಾ ಗ್ರೂಪ್ ಪರವಾಗಿವೆ, ಎಂದು ನ್ಯಾಯಾಧೀಶರು ಹೇಳಿದರು.

2016 ರ ಅಕ್ಟೋಬರ್‌ನಲ್ಲಿ ನಡೆದ ಟಾಟಾ ಬೋರ್ಡ್ ಮೀಟಿಂಗ್(ಮಂಡಳಿ ಸಭೆ)ಯಲ್ಲಿ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್‌ನ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವುದನ್ನು, ರಕ್ತ ಕ್ರೀಡೆ ಮತ್ತು ಹೊಂಚುದಾಳಿಯಂತೆ ಮತ್ತು ಸಾಂಸ್ಥಿಕ ಆಡಳಿತದ ತತ್ವಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಶಪೂರ್ಜಿ ಪಲ್ಲೊಂಜಿ ಗ್ರೂಪ್ ಆಗ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

RELATED TOPICS:
English summary :Supreme court upholds decision of sacking Cyrus Mistry from chairman post by Tata Sons

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...