Mon,May13,2024
ಕನ್ನಡ / English

ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ರಾಜೀನಾಮೆ | ಜನತಾ ನ್ಯೂಸ್

05 Apr 2021
1833

ಮುಂಬೈ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಮುಂಬೈ ಹೈಕೋರ್ಟ್ ಮೆಟ್ಟಲೇರಿದ್ದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರು ತಮ್ಮ ಪ್ರಯತ್ನದಲ್ಲಿ ಮೊದಲ ಭಾರಿಗೆ ಯಶಸ್ವಿಯಾಗಿದ್ದಾರೆ.

ಪರಂಬೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಗೆ ಬಾಂಬೆ ಹೈಕೋರ್ಟ್ ಸ್ಪಂದಿಸಿದ ಕೆಲವೇ ಗಂಟೆಗಳ ನಂತರ ಅನಿಲ್ ದೇಶ್‌ಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ಕೇಂದ್ರೀಯ ತನಿಖಾ ದಳ(ಸಿಬಿಐ) ನ ಪ್ರಾಥಮಿಕ ತನಿಖೆಗೆ ಆದೇಶಿಸಿದ ನಂತರ ದೇಶಮುಖ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ನೈತಿಕ ಕಾರಣಗಳಿಗಾಗಿ ರಾಜ್ಯ ಗೃಹ ಸಚಿವರ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ, ಎಂದು ಬರೆದಿದ್ದಾರೆ.

ಹೈಕೋರ್ಟ್ ತೀರ್ಪಿನಲ್ಲಿ, 15 ದಿನಗಳ ಪ್ರಾಥಮಿಕ ವಿಚಾರಣೆಯ ನಂತರ ಮುಂದಿನ ಕ್ರಮಗಳ ಬಗ್ಗೆ ತನಿಖೆ ನಡೆಸಿ ತೀರ್ಮಾನಿಸಲು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ಸೂಚನೆ ನೀಡಲಾಗಿದೆ.

ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರ ರಾಜೀನಾಮೆಯು ಆಡಳಿತಾರೂಢ ಮಹಾರಾಷ್ಟ್ರ ವಿಕಾಸ್ ಅಘಾದಿಯಲ್ಲಿ ಸಂಚಲನ ಮೂಡಿಸಿದೆ. ಕುಖ್ಯಾತ ಮುಂಬೈ ಪೋಲಿಸ್ ಅಧಿಕಾರಿ ಸಚಿನ್ ವಾಜೆ ಜೊತೆ ಎನ್‌ಸಿಪಿ ಹಿರಿಯ ಮುಖಂಡ ಅನಿಲ್ ದೇಶ್‌ಮುಖ್ ಹೆಸರು ಪದೇಪದೇ ತಳಕು ಹಾಕುತ್ತಿದ್ದರೂ ತಮ್ಮ ವಿರುದ್ಧದ ಆರೋಪಗಳನ್ನು ದೇಶ್‌ಮುಖ್ ನಿರಾಕರಿಸುತ್ತಲೇ ಬಂದಿದ್ದರು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೂಡ ದೇಶ್‌ಮುಖ್ ಅವರನ್ನು ರಕ್ಷಿಸಲು ಮುಂದಾಗಿದ್ದರು. ಆದರೆ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಸೋಮವಾರ ಅವರು ರಾಜೀನಾಮೆ ಸಲ್ಲಿಸಿದ್ದರು.

RELATED TOPICS:
English summary :High court orders CBI enquiry : Maharashtra HM Anil Deshmukh resigns

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...