Fri,May10,2024
ಕನ್ನಡ / English

ನಾಳೆ ಸಾರಿಗೆ ನೌಕರರ ಮುಷ್ಕರ ನಡೆದೇ ನಡೆಯುತ್ತದೆ: ಕೋಡಿಹಳ್ಳಿ ಚಂದ್ರಶೇಖರ್ | ಜನತಾ ನ್ಯೂಸ್

06 Apr 2021
1370

ಬೆಂಗಳೂರು : ರಾಜ್ಯದ ಸಾರಿಗೆ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ನಾಳೆ ಮುಷ್ಕರ ನಡೆಯೋದು ಖಚಿತ. ಯಾವುದೇ ಕಾರಣಕ್ಕೂ ಮುಷ್ಕರ ನಿಲ್ಲುವುದಿಲ್ಲ. ಪ್ರತಿಭಟನೆಯನ್ನು ಬೇಡಿಕೆ ಈಡೇರಿಸೋದಕ್ಕಾಗಿ ಒತ್ತಾಯಿಸಿ ನಾಳೆ ಸಾರಿಗೆ ನೌಕರರ ನಡೆಸಲಿದ್ದಾರೆ ಎಂಬುದಾಗಿ ಸಾರಿಗೆ ನೌಕರರ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಈ ಬಗ್ಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದ್ದು, ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಬೇಡಿಕೆ ಈಡೇರಿಸುವಂತೆ ನಾವು ಸರ್ಕಾರಕ್ಕೆ 3 ತಿಂಗಳ ಗಡುವು ನೀಡಿದ್ದೆವು. ಸರ್ಕಾರವೂ ಡಿಸೆಂಬರ್ 14ರಂದು ಲಿಖಿತ ರೂಪದಲ್ಲಿ ಭರವಸೆ ನೀಡಿತ್ತು. ಅದು ಸುಳ್ಳು ಭರವಸೆ ಎಂದು ಈಗ ಗೊತ್ತಾಗಿದೆ. ನಮಗೆ ನೀಡಿದ ಭರವಸೆ, ಆಶ್ವಾಸನೆಗಳು ಈಡೇರುವ ತನಕ ಬಸ್ ಮುಟ್ಟೋದಿಲ್ಲ ಎಂದು ಹೇಳಿದ್ದು, ಮುಷ್ಕರ ಘೋಷಿಸಿದ್ದಾರೆ.

ಸರ್ಕಾರ ನೌಕರರಿಗೆ ಸಂಬಂಧಿಸಿದ 8 ಬೇಡಿಕೆಗಳನ್ನು ಈಡೆರಿಸಿದ್ದೇವೆ ಎನ್ನುತ್ತಿದೆ. ಆದರೆ, ಆ ಯಾವ ಬೇಡಿಕೆಗಳೂ ನೌಕರರ ಪರವಾಗಿಲ್ಲ. ಸರ್ಕಾರ ಮೇ 4ರ ನಂತರ ಭರವಸೆ ಈಡೇರಿಸಲಾಗುವುದು ಎನ್ನುತ್ತಿದೆ. ಆದರೆ, ಆ ಮಾತಿನ ಮೇಲೆ ನಮಗೆ ನಂಬಿಕೆ ಇಲ್ಲ. ಇದು ನೀತಿಸಂಹಿತೆಯ ನೆಪ ಹೇಳಿ ಪಲಾಯನ ಮಾಡಲು ದಾರಿ ಹುಡುಕಿದೆ. ಇದು ಯಾವುದೇ ಹೊಸ ಜನಪ್ರಿಯ ಯೋಜನೆ ಅಲ್ಲ. ನಮಗೆ ಕೊಟ್ಟಿರುವ ಆಶ್ವಾಸನೆ ಈಡೇರಿಸುತ್ತಿದ್ದಾರೆ ಅಷ್ಟೇ. ಇದಕ್ಕೆಲ್ಲಾ ನೀತಿಸಂಹಿತೆ ಅಡ್ಡಿಯಾಗದು ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಸೋದಕ್ಕಾಗಿ ಮೀನಾ ಮೇಷ ಏಣಿಸುತ್ತಿರುವಂತ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಬೇಕು. ಹೀಗಾಗಿಯೇ ನಾಳೆ ಮತ್ತೆ ಮುಷ್ಕರ ನಡೆಸಲಾಗುತ್ತಿದೆ. ನಾಳೆ ಯಾವುದೇ ಕಾರಣಕ್ಕೂ ಮುಷ್ಕರ ನಿಲ್ಲಿಸೋದಿಲ್ಲ. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲಾಗುತ್ತದೆ ಎಂದು ಹೇಳಿದರು.

ಮುಷ್ಕರ ಕ್ಕೆ ಮುಂದಾಗಿರೋ ಸಾರಿಗೆ ನೌಕರರಿಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಸಾಥ್ ಕೊಟ್ಟಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ. ಅವರಿಗೆ ಪೂರ್ಣ ವೇತನ ನೀಡಿ, ಸಮಯಕ್ಕೆ ಸರಿಯಾಗಿ ವೇತನ ಕೊಡಿ ಅಂತ ನಾರಾಯಣಗೌಡ ಬೆಂಬಲ ಸೂಚಿಸಿದ್ದಾರೆ.

RELATED TOPICS:
English summary :Kodihalli Chandrashekar

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...