Fri,May17,2024
ಕನ್ನಡ / English

2020-21ರಲ್ಲಿ ರಸಗೊಬ್ಬರ ಸಬ್ಸಿಡಿಗಾಗಿ 1.3 ಲಕ್ಷ ಕೋಟಿ ರೂ ವೆಚ್ಚ: ಎಚ್ ಡಿ ಕುಮಾರಸ್ವಾಮಿಗೆ ಸದಾನಂದ ಗೌಡ ತಿರುಗೇಟು | ಜನತಾ ನ್ಯೂಸ್

13 Apr 2021
1578

ಬೆಂಗಳೂರು : ದೇಶಾದ್ಯಂತ ಲಭ್ಯವಿರುವ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ರಸಗೊಬ್ಬರ ಉತ್ಪಾದಕರು ಸಮ್ಮತಿಸಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ.

ಇಫ್ಕೋ, ಐಪಿಎಲ್ ನಂತಹ ಪ್ರಮುಖ ಕಂಪನಿಗಳು ಹಳೆ ದರ ಮುಂದುವರಿಸುವ ಬಗ್ಗೆ ಆಯಾ ರಾಜ್ಯ ಕೃಷಿ ಇಲಾಖೆಗಳಿಗೆ ಈಗಾಗಲೇ ಪತ್ರ ಬರೆದಿವೆ ಎಂದರು.

ದೇಶದಲ್ಲಿ ಎಲ್ಲ ನಮೂನೆಯ ರಸಗೊಬ್ಬರಗಳು ಸಾಕಷ್ಟು ದಾಸ್ತಾನು ಇವೆ. ಮುಂಗಾರು ಹಂಗಾಮಿನಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಇದಕ್ಕೆ ಈಗಿನಿಂದಲೇ ಎಲ್ಲ ರೀತಿಯ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ರಸಗೊಬ್ಬರ ತಯಾರಿಕೆಗೆ ಬೇಕಾಗುವ ಶೇಕಡಾ 90ರಷ್ಟು ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರ ಹೆಚ್ಚಾದ ಕಾರಣ ಇಲ್ಲಿಯೂ ಹೆಚ್ಚಾಗಿತ್ತು. ಸದ್ಯಕ್ಕಂತೂ ರಸಗೊಬ್ಬರ ಕಂಪನಿಗಳು ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿವೆ. ಅವರಿಗೆಲ್ಲ ಹೃತ್ಪೂರ್ವಕ ಧನ್ಯವಾದಗಳು. ರಸಗೊಬ್ಬರದ ಪ್ರಮುಖ ಬಳಕೆದಾರರಾದ ಅಮೆರಿಕ, ಬ್ರೆಜಿಲ್, ಐರೋಪ್ಯ ಒಕ್ಕೂಟ ದೇಶಗಳಲ್ಲಿ ಹಂಗಾಮು ಮುಗಿದಿರುವುದರಿಂದ ಬೇಡಿಕೆ ಕುಸಿದು ಬೆಲೆಯೂ ಇಳಿಯತೊಡಗಿದೆ. ಹಾಗಾಗಿ ಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಸುಧಾರಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಎಲ್ಲ ನಮೂನೆಯ ರಸಗೊಬ್ಬರಗಳು ಸಾಕಷ್ಟು ದಾಸ್ತಾನು ಇವೆ. ಮುಂಗಾರು ಹಂಗಾಮಿನಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಇದಕ್ಕೆ ಈಗಿನಿಂದಲೇ ಎಲ್ಲ ರೀತಿಯ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ರೈತ ಕಲ್ಯಾಣದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಇರುವ ಬದ್ಧತೆಯ ಬಗ್ಗೆ ಯಾರಿಂದಲೂ ಪ್ರಮಾಣ ಪತ್ರ ಬೇಕಾಗಿಲ್ಲ. ರೈತರಿಗೆ ಆದಷ್ಟು ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಪೂರೈಸಲು ಮೋದಿ ಸರ್ಕಾರ ಬದ್ಧವಾಗಿದೆ. ರಸಗೊಬ್ಬರ ಸಬ್ಸಿಡಿಗಾಗಿ ಭಾರೀ ದೊಡ್ಡ ಮೊತ್ತದ ಹಣವನ್ನು ವ್ಯಯಿಸಲಾಗುತ್ತದೆ.

2019-20ನೇ ಸಾಲಿನಲ್ಲಿ ರಸಗೊಬ್ಬರ ಸಬ್ಸಿಡಿಗಾಗಿ 83,467.85 ಕೋಟಿ ರೂ ಒದಗಿಸಲಾಗಿತ್ತು. ಕಳೆದ ಸಾಲಿನಲ್ಲಿ (2020-21) ಕೊರೊನಾ ಸಂಕಷ್ಟದ ಮಧ್ಯೆಯೂ 1,31,229.51 ಕೋಟಿ ರೂಪಾಯಿ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ. ಒಂದೇಒಂದು ನಯಾಪೈಸೆ ಸಬ್ಸಿಡಿಯನ್ನೂ ಉಳಿಸಿಕೊಂಡಿಲ್ಲ. ಇದು ಮೋದಿ ಸರ್ಕಾರ ಕಾರ್ಯನಿರ್ವಹಿಸುವ ರೀತಿ ಎಂದು ಅವರು ಹೇಳಿದರು.

RELATED TOPICS:
English summary :sadanand gowda and HDK

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...